ಎಸ್ಐಟಿಯಿಂದ ಸಂತ್ರಸ್ತೆಯ ಪ್ರಾಥಮಿಕ ವಿಚಾರಣೆ
ಬೆಂಗಳೂರು, ಮಾ. ೩೦: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬAಧಿಸಿದAತೆ ಸಂತ್ರಸ್ತ ಯುವತಿ ತಾ. ೩೦ ರಂದು ನ್ಯಾಯಾಲಯದ ಮುಂದೆ ಹಾಜರಾಗಿ ಸಿಆರ್ಪಿಸಿ ೧೬೪ರಡಿ ಹೇಳಿಕೆ ದಾಖಲಿಸಿದ ನಂತರ ಪೊಲೀಸರು ಆಕೆಯನ್ನು ಆಡುಗೋಡಿಯಲ್ಲಿರುವ ವಿಶೇಷ ವಿಚಾರಣಾ ಕೊಠಡಿಗೆ ಕರೆತಂದು ವಿಚಾರಣೆಗೊಳಪಡಿಸಿದರು. ನ್ಯಾಯಾಲಯದ ಸೂಚನೆಯಂತೆ ಯುವತಿ ಕಾರಿನಲ್ಲಿ ಆಡುಗೋಡಿಗೆ ಬಂದಿದ್ದು, ಉನ್ನತಾಧಿಕಾರಿಗಳಿಂದ ವಿಚಾರಣೆ ಎದುರಿಸಿದಳು. ವಿಶೇಷ ವಿಚಾರಣಾ ಕೊಠಡಿ ಸುತ್ತಮುತ್ತ ೫೦ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ ಒದಗಿಸಲಾಗಿತ್ತು. ಎಸ್ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ, ಎಸಿಪಿ ಕವಿತಾ ಹಾಗೂ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಜಂಟಿಯಾಗಿ ಯುವತಿಯನ್ನು ಪ್ರಾಥಮಿಕ ಹಂತದಲ್ಲಿ ವಿಚಾರಣೆಗೆ ಒಳಪಡಿಸಿ ಪ್ರಕರಣಕ್ಕೆ ಸಂಬAಧಿಸಿದAತೆ ಹೇಳಿಕೆ ದಾಖಲಿಸಿಕೊಂಡರು. ಯುವತಿಯ ಗುರುತು ಪತ್ತೆ, ಸಿಡಿಯಲ್ಲಿದ್ದ ಧ್ವನಿ ಪರೀಕ್ಷೆ, ಘಟನೆ ನಡೆದ ಸ್ಥಳ, ರಮೇಶ ಜಾರಕಿಹೊಳಿ ಅವರ ಸಂಪರ್ಕ ಹೇಗಾಯಿತು? ಎಂಬಿತ್ಯಾದಿ ಪ್ರಶ್ನೆಗಳನ್ನು ತನಿಖಾಧಿಕಾರಿಗಳು ಯುವತಿ ಮುಂದಿಟ್ಟರು. ಯುವತಿಯ ಪ್ರಾಥಮಿಕ ವಿಚಾರಣೆ ಮುಕ್ತಾಯವಾಗಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಮತ್ತೊಂದು ನೋಟೀಸ್ ನೀಡಿ ಕಳುಹಿಸಲಾಗಿದೆ. ನಾಳೆ ಯುವತಿಯನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ.
ಇಂಜಿನಿಯರಿAಗ್ ಸಂಶೋಧನೆ-ಅಭಿವೃದ್ಧಿ ನೀತಿ
ಬೆಂಗಳೂರು, ಮಾ. ೩೦: ದೇಶದಲ್ಲಿ ಮೊತ್ತ ಮೊದಲಿಗೆ ಕರ್ನಾಟಕವು ಸಂಶೋಧನೆ ಮತ್ತು ಅಭಿವೃದ್ಧಿಗೆ ಶಕ್ತಿ ತುಂಬುವ ಇಂಜಿನಿಯರಿAಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯನ್ನು ಪ್ರಕಟಿಸಿದ್ದು, ಇದರಿಂದ ಅಮೇರಿಕಾ ಕಂಪೆನಿಗಳ ಹೂಡಿಕೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಕೇರಳದಲ್ಲಿನ ಚುನಾವಣಾ ಪ್ರಚಾರದ ನಡುವೆಯೇ ಭಾರತ-ಅಮೇರಿಕಾ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆ ಹಮ್ಮಿಕೊಂಡಿದ್ದ ವರ್ಚುವಲ್ ಸಭೆಯಲ್ಲಿ ತಿರುವನಂತಪುರದಿAದಲೇ ಪಾಲ್ಗೊಂಡು ಮಾತನಾಡಿದ ಅವರು, ಈ ನೀತಿಯು ಕೈಗಾರಿಕಾಭಿವೃದ್ಧಿಗೆ ಹೆಚ್ಚು ಪೂರಕವಾಗಲಿದೆ ಹಾಗೂ ಅತ್ಯುತ್ತಮ ಮಾನವ ಸಂಪನ್ಮೂಲ ಸೃಷ್ಟಿಗೂ ಇದು ಸಹಾಯಕವಾಗುತ್ತದೆ ಎಂದು ಹೇಳಿದರು. ಕೈಗಾರಿಕೆ ಮತ್ತು ಹೂಡಿಕೆಗೆ ಪೂರಕವಾದ ರಾಜ್ಯ ಕರ್ನಾಟಕ. ಹೊಸ ಉದ್ಯಮಗಳನ್ನು ಸ್ಥಾಪಿಸಲು ಸೂಕ್ತವಾದ ತಾಣ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತಿದೆ ಎಂದ ಅವರು, ರಾಜ್ಯದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ, ಭಾರತೀಯ ತಾಂತ್ರಿಕ ಸಂಸ್ಥೆ ಹಾಗೂ ಅಂತಾರಾಷ್ಟಿçÃಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯAತಹ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿವೆ. ಹೀಗಾಗಿ ಉತ್ಕೃಷ್ಟ ಮಾನವ ಸಂಪನ್ಮೂಲಕ್ಕೂ ರಾಜ್ಯದಲ್ಲಿ ಕೊರತೆ ಇಲ್ಲ ಎಂದು ಹೇಳಿದರು. ಇನ್ನು ಆವಿಷ್ಕಾರದಲ್ಲೂ ಕರ್ನಾಟಕ ನಂಬರ್ ೧ ಸ್ಥಾನದಲ್ಲೇ ಇದೆ. ನೀತಿ ಆಯೋಗದ ಆವಿಷ್ಕಾರ ಸೂಚ್ಯಂಕದಲ್ಲಿ ರಾಜ್ಯವು ೨೦೧೯, ೨೦೨೦ ಕ್ರಮವಾಗಿ ಮೊದಲ ಸ್ಥಾನದಲ್ಲೇ ಇದೆ. ಈ ವರ್ಚುಯಲ್ ಸಭೆಯಲ್ಲಿ ಭಾರತದಲ್ಲಿರುವ ಸ್ಯಾನ್ಪ್ರಾನ್ಸಿಸ್ಕೋ ರಾಜ್ಯದ ಕಾನ್ಸುಲ್ ಜನರಲ್ ಡಾ. ಟಿ.ವಿ. ನಾಗೇಂದ್ರ ಪ್ರಸಾದ್, ಉಪ ಕಾನ್ಸುಲ್ ಜನರಲ್ ರಾಜೇಶ್ ನಾಯಕ್, ಅಮೇರಿಕಾ-ಭಾರತ ಕಾರ್ಯತಂತ್ರ ವೇದಿಕೆಯ ಅಧ್ಯಕ್ಷ ಜಾನ್ ಚಾಂಬರ್ಸ್, ಇದೇ ವೇದಿಕೆಯ ವೆಸ್ಟ್ ಕೋಸ್ಟ್ ವಿಭಾಗದ ಮುಖ್ಯಸ್ಥರಾದ ದೀಪ್ತಿ ದೇಸಾಯಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ ಪಾಲ್ಗೊಂಡಿದ್ದರು.
ಕರಡಿ ದಾಳಿ : ನಾಲ್ವರಿಗೆ ಗಾಯ
ಬೆಂಗಳೂರು, ಮಾ. ೩೦: ಆನೆಕಲ್ ತಾಲೂಕಿನ ಶೆಟ್ಟಿಹಳ್ಳಿ ಬಳಿ ಕರಡಿ ದಾಳಿಗೊಳಗಾಗಿ ನಾಲ್ವರು ಗ್ರಾಮಸ್ಥರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಶ್ರೀನಿವಾಸ್ ರೆಡ್ಡಿ, ರಾಮಕ್ಕ, ಮಂಜು ಮತ್ತು ವೆಂಕಟಸ್ವಾಮಿ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆನೆಕಲ್ ಪಟ್ಟಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗೆ, ಬನ್ನೇರುಘಟ್ಟ ಪ್ರಾಣಿ ಸಂಗ್ರಹಾಲಯದಿAದ ಕರಡಿಯೊಂದು ತಪ್ಪಿಸಿಕೊಂಡಿತ್ತು. ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿದ ಕರಡಿ ಆ ಕರಡಿಯೇ ಆಗಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ.
ಸಿದ್ದೇಶ್ವರ ಬೆಟ್ಟಕ್ಕೆ ಬೆಂಕಿ:೧೬ ಎಕರೆ ಅರಣ್ಯ ನಾಶ
ಮೈಸೂರು, ಮಾ. ೩೦: ನಂಜನಗೂಡಿನ ಕಾರ್ಯ ಸಿದ್ದೇಶ್ವರ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಪರಿಣಾಮ ಸುಮಾರು ೧೬ ಎಕರೆ ಅರಣ್ಯ ನಾಶವಾಗಿದೆ ಎಂದು ತಿಳಿದುಬಂದಿದೆ. ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಹೋಬಳಿ ವ್ಯಾಪ್ತಿಯ ಕಾರ್ಯ ಗ್ರಾಮದ ಶ್ರೀ ಸಿದ್ದೇಶ್ವರ ಬೆಟ್ಟದಲ್ಲಿ ಭಾನುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಸುಳಿಗಾಳಿಗೆ ಬೆಂಕಿ ಇಡೀ ಅರಣ್ಯ ಪ್ರದೇಶವನ್ನು ವ್ಯಾಪಿಸಿದೆ. ಅರಣ್ಯ ಪ್ರದೇಶದಲ್ಲಿದ್ದ ಗಂಧದ ಮರ, ನೀಲಗಿರಿ ಮರಗಳು ಸೇರಿದಂತೆ ಹಲವು ಬಗೆಯ ಔಷಧೀಯ ಗಿಡ ಮರಗಳು ಸುಟ್ಟು ಭಸ್ಮವಾಗಿದೆ. ಸಮೀಪದ ಗ್ರಾಮಸ್ಥರು ಅರಣ್ಯಕ್ಕೆ ಬೆಂಕಿ ತಗುಲಿರುವುದನ್ನು ಗಮನಿಸಿದ್ದು ಕೂಡಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಗೃಹರಕ್ಷಕ ದಳದ ಸಿಬ್ಬಂದಿ ಹರಸಾಹಸ ಪಡುವಂತಾಗಿದೆ. ಕಳೆದ ವಾರ ಕೂಡ ಉಮ್ಮತ್ತೂರು ಬೆಟ್ಟದ ಬಳಿ ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿತ್ತು.