ಕೂಡಿಗೆ, ಮಾ. ೩೦: ತಾಲೂಕು ಪಂಚಾಯಿತಿ ಸೋಮವಾರಪೇಟೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹಮ್ಮಿಕೊಳ್ಳಲಾಗಿರುವ ‘ದುಡಿಯೋಣ ಬಾ..’ ಜಾಥಾ ಅಭಿಯಾನಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಲುವರಾಜ್ ಚಾಲನೆ ನೀಡಿದರು.
ನಂತರ ಮಾತನಾಡುತ್ತ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಅನೇಕ ಕಾಮಗಾರಿಗಳನ್ನು ಕೈಗೊಳ್ಳುವ ಅವಕಾಶ ಇರುವುದರಿಂದ ಇದರ ಸದುಪಯೋಗವನ್ನು ಗ್ರಾಮದ ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಕೊರೊನಾ ಕುರಿತು ಜಾಗೃತಿಯನ್ನು ಸಹ ಸಾರ್ವಜನಿಕರಿಗೆ ಮೂಡಿಸಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಹಾಗೂ ಸಹಾಯಕ ನಿರ್ದೇಶಕ ರವೀಶ್, ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸದಸ್ಯರು ಮತ್ತು ಅಭಿವೃದ್ಧಿ ಅಧಿಕಾರಿ ಸೋಮೇಶ್ ಹಾಜರಿದ್ದರು
ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕ ವೃಂದದವರು ಹಾಗೂ ಸ್ಥಳೀಯ ಸ್ವಸಹಾಯ ಸಂಘದ ಪ್ರತಿನಿಧಿಗಳು ಸೇರಿದಂತೆ ನೂರಾರು ವಿದ್ಯಾರ್ಥಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.