ಸೋಮವಾರಪೇಟೆ, ಮಾ.೩೧: ಸಮೀಪದ ಬೆಟ್ಟದಳ್ಳಿ ಗ್ರಾಮದ ಮಾನವತಾ ಯುವಕ ಸಂಘ ಮತ್ತು ಗ್ರಾಮಾಭಿವೃದ್ಧಿ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೦ನೇ ಜನ್ಮದಿನಾಚರಣೆ ಪ್ರಯುಕ್ತ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಈ. ಜಯೇಂದ್ರ ತಿಳಿಸಿದ್ದಾರೆ.
ಗ್ರಾಮದ ಸಿದ್ಧಾರ್ಥನಗರದ ಅಂಬೇಡ್ಕರ್ ಮೈದಾನದಲ್ಲಿ ಏ.೧೪ ಮತ್ತು ೧೫ರಂದು ಪುರುಷರಿಗೆ ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್ ಮತ್ತು ಹಗ್ಗ ಜಗ್ಗಾಟ, ರಂಗೋಲಿ ಸ್ಪರ್ಧೆ, ಹಿರಿಯ ನಾಗರಿಕರಿಗೆ ಮಡಿಕೆ ಒಡೆಯವುದು, ಮಕ್ಕಳಿಗೆ ಓಟದ ಸ್ಪರ್ಧೆ ಹಾಗೂ ಅಂಬೇಡ್ಕರ್ ಅವರ ವಿಚಾರಗಳ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊ: ೭೬೭೬೧೯೮೪೩೭, ೬೩೬೧೭೬೫೯೨೪ನ್ನು ಸಂಪರ್ಕಿಸಬಹುದಾಗಿದೆ.