ಸಿದ್ದಾಪುರ, ಮಾ. ೩೧: ಮನೆಗಳ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ರಾತ್ರಿ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಮೂವರು ಯುವಕರನ್ನು ಬಂಧಿಸಿ ಮೂರು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಿದ್ದಾಪುರದ ಎಂ.ಜಿ. ರಸ್ತೆಯ ನಿವಾಸಿಯಾಗಿರುವ ರಂಜಿತ್ ಎಂಬವರಿಗೆ ಸೇರಿದ ಪಲ್ಸರ್ ಬೈಕ್ ಅನ್ನು ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದರು. ಕಳೆದ ಒಂದು ವಾರಗಳ ಹಿಂದೆ ಈ ಬೈಕ್ ಅನ್ನು ಆರೋಪಿಗಳು ಕಳ್ಳತನ ಮಾಡಿದ್ದರು. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ಜಾಡು ಹಿಡಿದ ಸಿದ್ದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಮೋಹನ್ರಾಜ್ ನೇತೃತ್ವದಲ್ಲಿ ತಂಡ ರಚನೆ ಮಾಡಿ ಬೈಕ್ ಕಳ್ಳತನದ ಬಗ್ಗೆ ತನಿಖೆ ನಡೆಸಿ ಮಾಹಿತಿ ಪಡೆದುಕೊಂಡ ಪೊಲೀಸರು ನಾಪೋಕ್ಲುವಿನ ಹಳೇ ತಾಲೂಕು ನಿವಾಸಿಗಳಾದ ಬೈಕ್ ಮೆಕ್ಯಾನಿಕ್ ಹಾಗೂ ಆಟೋ ಚಾಲಕನಾಗಿರುವ ಅರುಣ (೨೬), ಕೂಲಿ ಕೆಲಸಗಾರ ನಿಶಾಂತ್ (೨೮), ಮಿಥುನ್ (೨೫) ಎಂಬ ಮೂವರು ಯುವಕರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಕಳೆದ ೨ ವರ್ಷಗಳ ಹಿಂದೆ ಅರೆಕಾಡು ಗ್ರಾಮದಲ್ಲಿ ಹಾಗೂ ಬೆಟ್ಟಗೇರಿ ಗ್ರಾಮದಲ್ಲಿ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಬೈಕ್ಗಳು ಸೇರಿ ಮೂರು ಬೈಕ್ಗಳನ್ನು ಕಳ್ಳತನ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಕಳ್ಳತನ ಮಾಡಿರುವ ಬೈಕ್ಗಳ ನಂಬರ್ ಪ್ಲೇಟ್ಗಳನ್ನು ತೆಗೆದು ಹಾಕಿ ಬೇರೆ ಸಂಖ್ಯೆಯ ನಂಬರ್ ಪ್ಲೇಟ್ಗಳನ್ನು ಅಳವಡಿಸಿಕೊಂಡು ಮೂವರು ಆರೋಪಿಗಳು ನಾಪೋಕ್ಲು ಸುತ್ತಮುತ್ತಲಿನಲ್ಲಿ ಕಳ್ಳತನ ಮಾಡಿರುವ ಬೈಕ್ಗಳಲ್ಲಿ ಸುತ್ತಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮೂವರು ಆರೋಪಿಗಳು ನಾಪೋಕ್ಲು ಪಟ್ಟಣದಲ್ಲಿ ಸುತ್ತಾಡುತ್ತಿರುವ ಸಂದರ್ಭದಲ್ಲಿ ಆರೋಪಿಗಳನ್ನು ಸಿದ್ದಾಪುರ ಪೊಲೀಸರು ಬಂಧಿಸಿ ಮೂರು ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಾದ ಕ್ಷಮಾಮಿಶ್ರಾರವರ ಮಾರ್ಗದರ್ಶನದಲ್ಲಿ ಮಡಿಕೇರಿ ಡಿ.ವೈ.ಎಸ್.ಪಿ. ಬಾರಿಕೆ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಮಡಿಕೇರಿ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ, ಠಾಣಾಧಿಕಾರಿ ಮೋಹನ್ ರಾಜ್, ಸಹಾಯಕ ಠಾಣಾಧಿಕಾರಿ ತಮ್ಮಯ್ಯ, ಮುಖ್ಯಪೇದೆ ರತನ್, ಅಪರಾಧ ಪತ್ತೆದಳದ ಸಿಬ್ಬಂದಿಗಳಾದ ವಸಂತ್ಕುಮಾರ್, ಮಲ್ಲಪ್ಪ ಮಗಶೀರ್, ಶಶಿಕುಮಾರ್, ಲವಕುಮಾರ್ ಹಾಗೂ ಇನ್ನಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
- ವರದಿ : ವಾಸು ಎ.ಎನ್.