ಮಡಿಕೇರಿ, ಮಾ. ೩೧: ಏಪ್ರಿಲ್ ೧ (ಇಂದು) ರಿಂದ ೪೫ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವಿದ್ದು, ಯಶಸ್ಸುಗೊಳಿಸುವಂತೆ ಸಂಬAಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಮಾಹಿತಿಯಿತ್ತರು.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಏಪ್ರಿಲ್ ೧ ರಿಂದ ೪೫ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಬೇಕಿದ್ದು, ಈ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕೋವಿಡ್-೧೯ ಲಸಿಕೆ ಪ್ರಗತಿ ಸಂಬAಧ ಮಾಹಿತಿ ಪಡೆದು ಅವರು ಮಾತನಾಡಿದರು.

ಸದ್ಯ ಕೊಡಗು ಜಿಲ್ಲೆ ಕೋವಿಡ್ ಲಸಿಕೆ ನೀಡುವ ಪ್ರಗತಿಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಅದರಂತೆ ಮುಂದುವರಿಸಿಕೊAಡು ಹೋಗಬೇಕು. ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ನಿರ್ದೇಶನ ನೀಡಿದರು. ಕೊರೊನಾ ವೈರಸ್ ನಿಯಂತ್ರಣ ಸಂಬAಧ ಇನ್ನೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆಯೂ ತಿಳಿಸಿದರು.

ಪ್ರವಾಸಿ ಸ್ಥಳಗಳು ಹಾಗೂ ಜನದಟ್ಟಣೆ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಬೇಕು. ಸಭೆ ಸಮಾರಂಭ ಹಾಗೂ ಹಬ್ಬ ಹರಿದಿನ ಸಂದರ್ಭಗಳಲ್ಲಿ ಹೆಚ್ಚು ಜನರು ಸೇರಬಾರದು. ಆ ದಿಸೆಯಲ್ಲಿ ಈಗಾಗಲೇ ನೇಮಿಸಿರುವ ನೋಡಲ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ನೇತೃತ್ವದ ತಂಡ ರಚಿಸಲಾಗಿದ್ದು, ತಮಗೆ ವಹಿಸಿರುವ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಚಾರುಲತ ಸೋಮಲ್ ಅವರು ಸೂಚಿಸಿದರು.

ಕೋವಿಡ್-೧೯ ನಿಯಂತ್ರಣ ಸಂಬAಧ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚುವುದು. ಪೊಲೀಸರ ಸಹಕಾರ ಬೇಕಿದ್ದಲ್ಲಿ ಪಡೆಯುವುದು, ಕೋವಿಡ್ ನಿಯಂತ್ರಣ ಸಂಬAಧ ಪೋಸ್ಟರ್‌ಗಳನ್ನು ಸಾರ್ವಜನಿಕ

(ಮೊದಲ ಪುಟದಿಂದ) ಸ್ಥಳಗಳಲ್ಲಿ ಅಳವಡಿಸಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಹೇಳಿದರು.

ಗುಡ್‌ಫ್ರೆöÊಡೇ, ಯುಗಾದಿ ಹೀಗೆ ಸಾಲು ಸಾಲು ಹಬ್ಬ ಹರಿದಿನಗಳು ಬರಲಿದ್ದು, ಹೆಚ್ಚಿನ ಜನರು ಸೇರಬಾರದು ಎಂದರು. ದೊಡ್ಡ ದೊಡ್ಡ ಹೊಟೇಲ್‌ಗಳು, ಜನದಟ್ಟಣೆ ಪ್ರದೇಶಗಳು, ರೆಸಾರ್ಟ್ಗಳಲ್ಲಿ ಸ್ಕಿçÃನಿಂಗ್ ಪರೀಕ್ಷೆ ಮಾಡಬೇಕು. ಜಿಲ್ಲೆಯ ಕುಟ್ಟ-ಮಾಕುಟ್ಟ, ಕರಿಕೆ ಗಡಿಭಾಗದ ಚೆಕ್‌ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡಬೇಕು ಎಂದರು.

ಕಂಟೈನ್‌ಮೆAಟ್ ವಲಯಗಳಲ್ಲಿ ಹೆಚ್ಚಿನ ನಿಗಾವಹಿಸಬೇಕು. ಕ್ವಾರಂಟೈನ್ ಪಾಲಿಸುತ್ತಿದ್ದಾರೆಯೇ ಎಂದು ಗಮನಿಸಬೇಕು. ಕೋವಿಡ್-೧೯ ನಿಯಂತ್ರಣ ಸಂಬAಧ ಸರ್ಕಾರದ ನಿಯಮಗಳನ್ನು ಪಾಲಿಸದಿದ್ದಲ್ಲಿ ಕ್ರಮವಹಿಸಬೇಕು. ಕೊರೊನಾ ಎರಡನೇ ಅಲೆಯ ಸರಪಳಿಯನ್ನು ಕಡಿತ ಮಾಡುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ ಎಂದು ಅವರು ಸೂಚಿಸಿದರು.

ಎಲ್ಲಾ ಕೇಂದ್ರಗಳಲ್ಲೂ ಲಸಿಕೆ

ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಗೋಪಿನಾಥ್ ಅವರು ಮಾಹಿತಿ ನೀಡಿ ಗುರುವಾರದಿಂದ ೪೫ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಲಾಗುತ್ತದೆ. ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಉಪ ಆರೋಗ್ಯ ಕೇಂದ್ರಗಳಲ್ಲೂ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ೪೫ ವರ್ಷ ಮೇಲ್ಪಟ್ಟ ೧,೫೫,೬೦೬ ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಇದ್ದು, ಇದರಲ್ಲಿ ಈಗಾಗಲೇ ೨೨,೪೩೩ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ. ಕಾರ್ಯಪ್ಪ, ಡಾ. ಮಹೇಶ್, ಡಾ. ರೂಪೇಶ್, ಡಾ. ಆನಂದ್, ಡಾ. ಯತಿರಾಜು ಅವರು ಕೋವಿಡ್-೧೯ ನಿಯಂತ್ರಣ ಮತ್ತು ಕೋವಿಡ್ ಲಸಿಕೆ ನೀಡುವ ಸಂಬAಧ ಹಲವು ಮಾಹಿತಿ ನೀಡಿದರು.

ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರಾಜು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಮದನ್ ಮೋಹನ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವಿಷ್ಣುಮೂರ್ತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ, ತಹಶೀಲ್ದಾರರಾದ ಮಹೇಶ್, ಗೋವಿಂದರಾಜು, ಪೌರಾಯುಕ್ತ ಎಸ್.ವಿ. ರಾಮದಾಸ್, ಮಕ್ಕಳ ರಕ್ಷಣಾಧಿಕಾರಿ ಅರುಂಧತಿ, ತಾ.ಪಂ. ಇಒಗಳಾದ ಕವಿತಾ (ಮಡಿಕೇರಿ), ಅಪ್ಪಣ್ಣ (ವೀರಾಜಪೇಟೆ) ಪ.ಪಂ. ಇಒಗಳಾದ ನಾಚಪ್ಪ, ಶ್ರೀಧರ ಇತರರು ಇದ್ದರು.