ನಾಪೋಕ್ಲು, ಮಾ. ೩೧: ದಾನ ಮಾಡುವದು ಮನುಷ್ಯನ ಶ್ರೇಷ್ಠ ಗುಣ. ಅದರಿಂದ ಅವನು ಜೀವನದಲ್ಲಿ ಸಾರ್ಥಕತೆಯನ್ನು ಪಡೆದುಕೊಳ್ಳಲು ಸಾಧ್ಯ ಎಂದು ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು.
ಸಮೀಪದ ಮರಂದೋಡ ಗ್ರಾಮದ ಸ್ಪೋರ್ಟ್ಸ್ ಮತ್ತು ರಿಕ್ರಿಯೇಶನ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಒತ್ತೋರ್ಮೆ ಕೂಟ ಮತ್ತು ಸ್ಥಳ ದಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮನುಷ್ಯ ಜೀವನದಲ್ಲಿ ಏನು ಬೇಕಾದರೂ ಸಂಪಾದನೆ ಮಾಡಬಹುದು. ಆದರೆ, ನಾಪೋಕ್ಲು, ಮಾ. ೩೧: ದಾನ ಮಾಡುವದು ಮನುಷ್ಯನ ಶ್ರೇಷ್ಠ ಗುಣ. ಅದರಿಂದ ಅವನು ಜೀವನದಲ್ಲಿ ಸಾರ್ಥಕತೆಯನ್ನು ಪಡೆದುಕೊಳ್ಳಲು ಸಾಧ್ಯ ಎಂದು ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು.
ಸಮೀಪದ ಮರಂದೋಡ ಗ್ರಾಮದ ಸ್ಪೋರ್ಟ್ಸ್ ಮತ್ತು ರಿಕ್ರಿಯೇಶನ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಒತ್ತೋರ್ಮೆ ಕೂಟ ಮತ್ತು ಸ್ಥಳ ದಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮನುಷ್ಯ ಜೀವನದಲ್ಲಿ ಏನು ಬೇಕಾದರೂ ಸಂಪಾದನೆ ಮಾಡಬಹುದು. ಆದರೆ, ಚಿಟ್ಟಿಯಪ್ಪ, ಅಚ್ಚಮ್ಮ, ಗಣಪತಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕ್ಲಬ್ನ ಅಧ್ಯಕ್ಷ ಮಾರ್ಚಂಡ ಪ್ರವೀಣ್, ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಸದಸ್ಯ ಚೋಯಮಾಡಂಡ ಹರೀಶ್ ಮೊಣ್ಣಪ್ಪ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮೇರಿಯಂಡ ದಿವ್ಯ ಮಾಚಯ್ಯ ಸ್ವಾಗತ, ಚೋಯಮಾಡಂಡ ಕೃತಿಕಾ ಹರೀಶ್ ಅತಿಥಿ ಪರಿಚಯ, ಅನ್ನಾಡಿಯಂಡ ಪ್ರಭು ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.