ಕಣಿವೆ, ಮಾ. ೩೧: ಸಮೀಪದ ಕೂಡಿಗೆಯ ಸೈನಿಕ ಶಾಲೆಯಲ್ಲಿ ಮದರ್ ತೆರೇಸಾ ವೈದ್ಯಕೀಯ ತಪಾಸಣಾ ಘಟಕವನ್ನು ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕೆ.ಬಿ. ಕಾರ್ಯಪ್ಪ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸಂಸ್ಥೆ ಆರಂಭಿಸಿರುವ ವೈದ್ಯಕೀಯ ತಪಾಸಣಾ ಘಟಕ ಹೆಚ್ಚು ಉಪಯುಕ್ತವಾಗಲಿದೆ ಎಂದರು.
ಶಾಲಾವರಣದಲ್ಲಿ ಆರಂಭಿಸಲಾದ ಶುದ್ಧ ನೀರಿನ ಘಟಕವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮೋಹನ್ ಉದ್ಘಾಟಿಸಿದರು.
ಶಾಲೆಯ ಪ್ರಾಂಶುಪಾಲ ಕರ್ನಲ್ ಜಿ. ಕಣ್ಣನ್, ಉಪಪ್ರಾಂಶುಪಾಲ ಲೆಫ್ಟಿನೆಂಟ್ ಕರ್ನಲ್ ಸೀಮಾ ತ್ರಿಪಾಠಿ, ಆಡಳಿತಾಧಿಕಾರಿ ಸ್ಕಾ÷್ವಡ್ರನ್ ಲೀಡರ್ ಆರ್.ಕೆ.ಡೇ., ಸಂಗೀತ ಡೇ, ವೈದ್ಯಾಧಿಕಾರಿ ಡಾ. ಮಹೇಶ್, ಹಿರಿಯ ಶಿಕ್ಷಕ ಸೂರ್ಯನಾರಾಯಣ ಸೇರಿದಂತೆ ಇನ್ನಿತರರು ಇದ್ದರು.