ಸೋಮವಾರಪೇಟೆ, ಏ. ೧: ಇನ್ನರ್ ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಸೋಮವಾರಪೇಟೆಯ ಪ್ರಥಮ ಮಹಿಳಾ ಆಟೋ ಚಾಲಕಿ ಪ್ರಮೀಳಾ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಕ್ಲಬ್‌ನ ಅಧ್ಯಕ್ಷೆ ಕವಿತ ವಿರೂಪಾಕ್ಷ, ಮಹಿಳಾ ಸಮಾಜದ ಅಧ್ಯಕ್ಷೆ ಉಷಾ ತೇಜಸ್ವಿ, ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್, ಕ್ಲಬ್‌ನ ಉಪಾಧ್ಯಕ್ಷೆ ಆಶಾ ಯೋಗೇಂದ್ರ, ಜಂಟಿ ಕಾರ್ಯದರ್ಶಿ ಅಮೃತ ಕಿರಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.