ಸಿಎಂ ವಿರುದ್ಧ ಈಶ್ವರಪ್ಪ ದೂರು

ಬೆಂಗಳೂರು, ಏ. ೧: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು, ತಮ್ಮ ಇಲಾಖೆಯ ಕೆಲಸಗಳಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾನೂನು ಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರು ಸೇರಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ದೆಹಲಿಯ ವರಿಷ್ಠರಿಗೆ ದೂರು ನೀಡಿದ್ದಾರೆ. ಕಳೆದ ಒಂದುವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವನಾಗಿ ಕೆಲಸ ಮಾಡುತ್ತಿರುವ ತಮ್ಮ ಗಮನಕ್ಕೆ ಬಾರದಂತೆ ಸಿಎಂ ಯಡಿಯೂರಪ್ಪ ಇಲಾಖೆಯ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದ ಹಿರಿಯ ಸಚಿವನಾಗಿರುವ ತಮಗೆ ಇದರಿಂದ ನೋವಾಗಿದೆ ಎಂದಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾಗಿರುವ ರೂ. ೧೨೦೦ ಕೋಟಿಗೆ ಸಂಬAಧಿಸಿದAತೆ ಕಾನೂನು ಮೀರಿ ಸುಖಾಸುಮ್ಮನೆ ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಆರ್‌ಡಿಪಿಆರ್ ಇಲಾಖೆಯ ಅನುದಾನವನ್ನು ನೇರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಂಚಿದ್ದಾರೆ ಎಂದು ರಾಜ್ಯಪಾಲ ವಜುಭಾಯಿವಾಲಾ ಅವರನ್ನು ಭೇಟಿ ಮಾಡಿ ಈಶ್ವರಪ್ಪ ಅವರು ಲಿಖಿತ ದೂರು ನೀಡಿದ್ದಾರೆ.

ಅಪಘಾತ : ನೀರಾವರಿ ಆಯೋಗದ ನಾಲ್ವರು ದುರ್ಮರಣ

ಹೊಸಪೇಟೆ, ಏ. ೧: ಎರಡು ಇನೋವಾ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇಂದ್ರ ನೀರಾವರಿ ಆಯೋಗದ ಇಬ್ಬರು ಅಧಿಕಾರಿಗಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಕುಷ್ಟಗಿಯಿಂದ ಬೆಂಗಳೂರಿಗೆ ಹೊರಟ್ಟಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿಕೊಂಡು ಮತ್ತೊಂದು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಅಧಿಕಾರಿಗಳಿದ್ದ ಇನೋವಾ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದು ಇಬ್ಬರು ಅಧಿಕಾರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿಬ್ಬರು ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರನ್ನು ನೀರಾವರಿ ಆಯೋಗದಲ್ಲಿ ನಿರ್ದೇಶಕರಾಗಿರುವ ೫೦ ವರ್ಷದ ರಾಮಸ್ವಾಮಿ, ಜಿತೇಂದ್ರ (೫೦), ಕಾವ್ಯ (ತಿಪಟೂರು) ಮತ್ತು ೧೦ ವರ್ಷದ ಶರಣಬಸವ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರು ಸರ್ಕಾರಿ ಇನೋವಾ ಕಾರಿನ ಚಾಲಕ ಅನ್ವರ್, ಚಾಲಕ ಗಿರೀಶ್, ಮಂಜುಶ್ರೀ, ಶಿವಲೀಲಾ, ಸಿದ್ದಲಿಂಗೇಶ್ ಮತ್ತು ಸುವರ್ಣ ಎಂದು ತಿಳಿದುಬಂದಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಿಯಮ್ಮನಹಳ್ಳಿಯ ಹಾರುವನಹಳ್ಳಿ ಬಳಿಯ ರಾಷ್ಟಿçÃಯ ಹೆದ್ದಾರಿ ೫೦ರಲ್ಲಿ ಗುರುವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದರು.

ಶಾಸಕ-ಎಂಎಲ್‌ಸಿ ವಿರುದ್ಧ ಎಫ್‌ಐಆರ್

ಬೀದರ್, ಏ. ೧: ಆಸ್ತಿ ವಿವಾದಕ್ಕೆ ಸಂಬAಧಿಸಿದAತೆ ಹುಮನಾಬಾದ್ ಶಾಸಕ ರಾಜಶೇಖರ್ ಪಾಟೀಲ್, ಎಂಎಲ್‌ಸಿ ಚಂದ್ರಶೇಖರ್ ಪಾಟೀಲ್, ಬೀದರ್ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಭೀಮ್ ರಾವ್ ಪಾಟೀಲ್ ಮತ್ತು ಇತರ ೯ ಜನರ ವಿರುದ್ಧ ಪೊಲೀಸರು ಹುಮನಾಬಾದ್ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸ್ ಉನ್ನತ ಅಧಿಕಾರಿಗಳ ನಿರ್ದೇಶನದ ಮೇರೆಗೆ ನಾಗೇಶ್ವರಿ ಹೊಟೇಲ್ ಬಳಿ ಹೋದಾಗ ಅಲ್ಲಿ ಹುಮ್ನಾಬಾದ್ ಟೌನ್ ಮುನ್ಸಿಪಾಲಿಟಿ ಮತ್ತು ಬೀದರ್ ಟೌನ್ ಪ್ಲಾನರ್ ಅಧಿಕಾರಿಗಳು ಪ್ಲಾಟ್‌ಅನ್ನು ಅಳೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಜಮೀನನ್ನು ಇತ್ತೀಚೆಗೆ ಹುಮ್ನಾಬಾದ್ ಶಾಸಕ ರಾಜಶೇಖರ್ ಪಾಟೀಲ್ ಖರೀದಿಸಿದ್ದಾರೆ ಎಂದು ಹೇಳಲಾಗಿದೆ. ಸರ್ವೇ ಸಮಯದಲ್ಲಿ, ಇನ್ನೊಬ್ಬ ವ್ಯಕ್ತಿ ಸಿದ್ದಲಿಂಗಪ್ಪ ಪಾಟೀಲ್ ಮತ್ತು ಅವರ ಅನುಯಾಯಿಗಳು ಮಧ್ಯಪ್ರವೇಶಿಸಿ ರಾಜಶೇಖರ್ ಪಾಟೀಲ್ ಮತ್ತು ಅವರ ಬೆಂಬಲಿಗರನ್ನು ನಿಂದಿಸಲು ಪ್ರಾರಂಭಿಸಿದರು. ಅಧಿಕಾರಿಗಳ ಸಹಾಯದಿಂದ ಖರೀದಿಸದ ಇನ್ನೂ ಕೆಲವು ಸ್ಥಳವನ್ನು ಅತಿಕ್ರಮಿಸುತ್ತಿದ್ದಾರೆ ಎಂದು ಆರೋಪಿಸಿದರು. ಎರಡು ಗುಂಪು ಪರಸ್ಪರ ಕೈ-ಕೈ ಮೀಲಾಯಿಸಲು ಪ್ರಾರಂಭಿಸಿದಾಗ, ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ ನಂತರ ಗುಂಪು ಚದುರಿ ಹೋಯಿತು, ಎರಡೂ ಗುಂಪುಗಳು ಸಂಜೆ ಮತ್ತೆ ಜಮಾಯಿಸಿ ಮತ್ತೆ ಜಗಳವಾಡಲು ಪ್ರಾರಂಭಿಸಿದವು ಎಂದು ಪೊಲೀಸರು ತಿಳಿಸಿದ್ದಾರೆ. ರಾಜಶೇಖರ್ ಪಾಟೀಲ್ ಮತ್ತು ಸಿದ್ಧಲಿಂಗಪ್ಪ ಪಾಟೀಲ್ ಕೂಡ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು ಮತ್ತು ಕೌಂಟರ್ ದೂರು ದಾಖಲಿಸಿದ್ದು, ಪೊಲೀಸರು ಈ ಸಂಬAಧ ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ.

ಸಿಡಿ ಪ್ರಕರಣ : ಯುವತಿ ವಾಸವಿದ್ದ ಸ್ಥಳ ಮಹಜರು

ಬೆಂಗಳೂರು, ಏ. ೧: ರಮೇಶ್ ಜಾರಕಿಹೊಳಿ ಅವರೊಂದಿಗೆ ರಾಸಲೀಲೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ವಿಚಾರಣೆ ವೇಳೆ ಎಸ್‌ಐಟಿ ಎದುರು ಕಣ್ಣೀರು ಹಾಕಿದ್ದಾಳೆ. ಎಸ್‌ಐಟಿ ಅಧಿಕಾರಿಗಳ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೇ ಪೋಷಕರನ್ನು ಮಾತನಾಡಿಸಬೇಕು ಎಂದು ಯುವತಿ ಪಟ್ಟು ಹಿಡಿದಿದ್ದರಂತೆ. ಪೋಷಕರ ಭೇಟಿಗೆ ಅನುಮತಿ ನೀಡುವಂತೆ ಅಧಿಕಾರಿಗಳಿಗೆ ಯುವತಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಯುವತಿಯನ್ನು ಸಮಾಧಾನಪಡಿಸಿದ ಅಧಿಕಾರಿಗಳು, ನಾವು ಈಗ ನಿಮ್ಮ ಪೋಷಕರನ್ನು ಕರೆಸಿದರೆ, ಪೋಷಕರನ್ನು ಕರೆಸಿ ಮನವೊಲಿಕೆಗೆ ಯತ್ನಿಸಿದ್ದಾರೆ ಎಂಬ ಆರೋಪ ನಮ್ಮ ಮೇಲೆ ಬರುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಭೇಟಿಯಾಗಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯುವತಿ ವಾಸವಿದ್ದ ಆರ್.ಟಿ. ನಗರದ ಪಿಜಿಯಲ್ಲಿ ಸ್ಥಳ ಮಹಜರು ಪ್ರಕ್ರಿಯೆ ಅಂತ್ಯಗೊAಡಿದ್ದು, ಸಿಡಿ ಯುವತಿ ಸಮ್ಮುಖದಲ್ಲಿ ಸತತ ಮೂರುವರೆ ಗಂಟೆಗಳ ಕಾಲ ಎಸ್‌ಐಟಿ ತನಿಖಾಧಿಕಾರಿ ಎಸಿಪಿ ಕವಿತಾ ಅವರ ನೇತೃತ್ವದಲ್ಲಿ ಸ್ಥಳ ಮಹಜರು ಮಾಡಲಾಯಿತು. ಈ ವೇಳೆ ಪಿಜಿಯಲ್ಲಿದ್ದ ಯುವತಿಯ ಸಂಪೂರ್ಣ ಬಟ್ಟೆಗಳನ್ನು ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರೊಂದಿಗೆ ವೀಡಿಯೋ ಕಾಲ್‌ನಲ್ಲಿ ಮಾತನಾಡಿದ್ದರೆನ್ನಲಾದ ಮೊಬೈಲ್ ಫೋನ್‌ಗಳನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೇ, ಯುವತಿಯ ಕುರಿತಾಗಿ ಪಿಜಿ ಮಾಲೀಕರು, ಸುತ್ತಮುತ್ತಲಿನ ಜನರನ್ನು ತನಿಖಾಧಿಕಾರಿಗಳು ವಿಚಾರಣೆ ನಡೆಸಿ, ಮಾಹಿತಿ ಕಲೆಹಾಕಿದ್ದಾರೆ.

ಬಿಜೆಪಿ ಮುಖಂಡನ ಮೇಲೆ ಮೇಲೆ ಉಗ್ರರ ದಾಳಿ

ಶ್ರೀನಗರ, ಏ. ೧: ಬಿಜೆಪಿ ನಾಯಕನ ಮನೆ ಮೇಲೆ ಉಗ್ರರು ದಾಳಿ ನಡೆಸಿದ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಶ್ರೀನಗರದ ನೌಗಾಮ್ ಪ್ರದೇಶದಲ್ಲಿ ನಡೆದಿದೆ. ಬಾರಾಮುಲ್ಲಾ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನ್ವರ್ ಅಹ್ಮದ್ ಅವರ ಮನೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಉಗ್ರರು ನಡೆಸಿದ ದಾಳಿಯಲ್ಲಿ ಪೊಲೀಸ್ ಪೇದೆ ರಾಮೀಜ್ ರಾಜಾ ಗಾಯಗೊಂಡಿದ್ದರು, ಆಸ್ಪತ್ರೆಗೆ ಕರೆ ತರುವಷ್ಟರಲ್ಲೇ ಪೊಲೀಸ್ ಪೇದೆ ಸಾವನ್ನಪ್ಪಿದ್ದರು ಎಂದು ವೈದ್ಯ ನಾಜೀರ್ ಚೌದರಿ ತಿಳಿಸಿದ್ದಾರೆ. ಗುಂಡಿನ ದಾಳಿ ನಂತರ ಉಗ್ರರು ಅಲ್ಲಿಂದ ಪರಾರಿಯಾಗಿದ್ದಾರೆ.

ರಜನಿಕಾಂತ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ನವದೆಹಲಿ, ಏ. ೧: ೫೧ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟವಾಗಿದ್ದು ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಈ ಬಾರಿ ಪ್ರಶಸ್ತಿ ಒಲಿದಿದೆ. ೨೦೧೯ನೇ ಸಾಲಿನ ೫೧ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ದಕ್ಷಿಣ ಭಾರತದ ಖ್ಯಾತ ನಟ, ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನೀಡಲಾಗುತ್ತಿದೆ. ಅವರನ್ನು ಆಯ್ಕೆ ಮಾಡಿದ ಪ್ರಶಸ್ತಿ ಪುರಸ್ಕೃತರ ಆಯ್ಕೆ ತಂಡಕ್ಕೆ ನನ್ನ ಧನ್ಯವಾದಗಳು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ. ಮೇ ೩ ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಪ್ರಕಾಶ್ ಜಾವ್ಡೇಕರ್ ಸುದ್ದಿಗೋಷ್ಠಿಯಲ್ಲಿಂದು ಪ್ರಕಟಿಸಿದ್ದಾರೆ. ಮೂಲತಃ ಕನ್ನಡಿಗರಾದ ರಜನಿಕಾಂತ್, ಅವಕಾಶ ಅರಿಸಿ ತಮಿಳುನಾಡಿಗೆ ತೆರಳಿ ಅಲ್ಲಿನ ಚಿತ್ರರಂಗದಲ್ಲಿ ಮೇರು ವ್ಯಕ್ತಿಯಾಗಿ ಬೆಳೆದಿದ್ದಾರೆ.