ಮಡಿಕೇರಿ, ಏ. ೨: ತಾ. ೫ ರಂದು ಡಾ. ಬಾಬು ಜಗಜೀವನ್ ರಾಂ ಅವರ ೧೧೪ನೇ ಜನ್ಮ ದಿನಾಚರಣೆ ಹಾಗೂ ತಾ. ೧೪ ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೦ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ ಜೀವನ ಮತ್ತು ಸಾಧನೆ ಸಂಬAಧಿಸಿದAತೆ ಮಾಹಿತಿ ನೀಡುವ ನಿಟ್ಟಿನಲ್ಲಿ ಉಪನ್ಯಾಸಕರನ್ನು ಆಹ್ವಾನಿ ಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಸಲಹೆ ಮಾಡಿದರು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್ ಅವರು ಮಾಹಿತಿ ನೀಡಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಂ ಅವರ ಜಯಂತಿ ಆಯೋಜನೆ ಸಂಬAಧ ಇಲಾಖೆ ಯಿಂದ ಮಾರ್ಗಸೂಚಿ ಹೊರಡಿಸ ಲಾಗಿದ್ದು, ಅದರಂತೆ ವಿವಿಧ ಕಾರ್ಯ ಚಟುವಟಿಕೆ ಹಮ್ಮಿ ಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯಕೈಗೊಳ್ಳುವುದು, ಸಸಿ ನೆಡುವ ಕಾರ್ಯಕ್ರಮ, ಕೈತೋಟ ನಿರ್ಮಾಣ, ಹಸಿ ಮತ್ತು ಒಣ ಕಸ ಬೇರ್ಪಡಿಸಿ ಹಸಿ ಕಸ ಸಂಸ್ಕರಣಾ ಘಟಕವನ್ನು ಸ್ಥಾಪಿಸುವುದು, ಜಿಲ್ಲೆಯ ವಿದ್ಯಾರ್ಥಿ ನಿಲಯಗಳನ್ನು ಮಾದರಿ ವಿದ್ಯಾರ್ಥಿ ನಿಲಯಗಳನ್ನಾಗಿ ಪರಿವರ್ತಿಸುವುದು, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುವ ನಿಟ್ಟಿನಲ್ಲಿ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳುವುದು, ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮ ಬಗ್ಗೆ ಮಾಹಿತಿ ನೀಡುವುದು, ಇತರೆ ಕಾರ್ಯಚಟು ವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶೇಖರ್ ಅವರು ವಿವರಿಸಿದರು. ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್, ಜಿ.ಪಂ. ಯೋಜನಾ ನಿರ್ದೇಶಕರಾದ ಶ್ರೀಕಂಠ ಮೂರ್ತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಚಂದ್ರಶೇಖರ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಸುರೇಶ್‌ಭಟ್, ಜಿಲ್ಲಾ ಆಯುಷ್ ಅಧಿಕಾರಿ ಶ್ರೀನಿವಾಸ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಾಜು, ತಹಶೀಲ್ದಾರ್ ಮಹೇಶ್ ಇತರರು ಇದ್ದರು.