ಮಡಿಕೇರಿ, ಏ. ೧: ನಗರಸಭೆ ಚುನಾವಣಾ ದಿನಾಂಕ ಪ್ರಕಟವಾಗಿರುವ ಹಿನ್ನೆಲೆ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮವಹಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣೆ ಸಿದ್ಧತೆ ಬಗ್ಗೆ ಗುರುವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.

ನಗರಸಭೆ ಚುನಾವಣೆ ಸಂಬAಧ ಚುನಾವಣಾ ಆಯೋಗದ ನಿರ್ದೇಶನ ಮತ್ತು ಮಾರ್ಗಸೂಚಿಯನ್ನು ಚಾಚುತಪ್ಪದೆ ಪಾಲಿಸಬೇಕು. ಚುನಾವಣಾ ಆಯೋಗವು ಕಾಲಕಾಲಕ್ಕೆ ಹೊರಡಿಸುವ ಆದೇಶವನ್ನು ಪಾಲಿಸಬೇಕು ಎಂದರು.

ನಗರದ ೨೩ ವಾರ್ಡ್ಗಳಲ್ಲಿ ಕರಡು ಮತದಾರರ ಪಟ್ಟಿ, ಅಂತಿಮ ಮತದಾರರ ಪಟ್ಟಿ, ವಾರ್ಡ್ವಾರು ಮತಗಟ್ಟೆ ಕೇಂದ್ರಗಳು, ಸೂಕ್ಷö್ಮ ಮತ್ತು ಅತೀ ಸೂಕ್ಷö್ಮ ಮತಗಟ್ಟೆ ಕೇಂದ್ರಗಳ ಬಗ್ಗೆ ಗಮನಹರಿಸಬೇಕು. ೮ ವಾರ್ಡ್ಗಳಿಗೆ ಒಬ್ಬರಂತೆ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿ ನೇಮಕ ಮಾಡುವುದು ಹಾಗೂ ಭದ್ರತಾ ಕೊಠಡಿ ಮತ್ತು ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಸ್ಥಾಪನೆಗೆ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ನಗರಸಭೆ ಚುನಾವಣೆಗೆ ಸಿದ್ಧತೆ ಸಂಬAಧ ಹಲವು ಮಾಹಿತಿ ನೀಡಿದರು.

ಚುನಾವಣಾ ಅಧಿಕಾರಿ ಕಚೇರಿ ತೆರೆಯುವುದು, ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ, ಹೀಗೆ ಹಲವು ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಚುನಾವಣೆ ಸಂಬAಧ ವಾರ್ಡ್ವಾರು ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ೧೪೦೦ಕ್ಕೂ ಅಧಿಕ ಮತದಾರರಿದ್ದಲ್ಲಿ ಹೆಚ್ಚುವರಿ ಮತಗಟ್ಟೆ ನಿರ್ಮಿಸಲಾಗುವುದಾಗಿ ತಹಶೀಲ್ದಾರ್ ಮಹೇಶ್ ಹೇಳಿದರು.

ಕೃಷಿ ಇಲಾಖೆ ಉಪ ನಿರ್ದೇಶಕ ರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಶಿಧರ, ನಗರಾಭಿವೃದ್ಧಿ ಶಾಖೆಯ ಯೋಜನಾ ನಿರ್ದೇಶಕ ಪಿ. ರಾಜು, ಪೌರಾಯುಕ್ತ ರಾಮನಾಥ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಇತರರು ಇದ್ದರು