ಮಡಿಕೇರಿ ಏ. ೨ : ನಾಪೋಕ್ಲು ಕೊಡವ ಸಮಾಜದ ವತಿಯಿಂದ ತಾ. ೩ ಮತ್ತು ಏ. ೪ ರಂದು ಅಂತರ್ ಗ್ರಾಮ ಸಾಂಸ್ಕೃತಿಕ ಪೈಪೋಟಿ ಕಾರ್ಯಕ್ರಮ ನಡೆಯಲಿದೆ.

ತಾ. ೩ ರಂದು (ಇಂದು) ಸಂಜೆ ೩ ಗಂಟೆಗೆ ಕೊಡವ ಸಮಾಜದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮ ವನ್ನು ನಾಪೋಕ್ಲುವಿನ ಶ್ರೀ ಭಗವತಿ ದೇವಾಲಯದ ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಕುಲ್ಲೇಟಿರ ಎಸ್. ಮಾದಪ್ಪ ಉದ್ಘಾಟಿಸಲಿದ್ದು, ಮಾಜಿ ಸೈನಿಕ ಸಂಘದ ಉಪಾಧ್ಯಕ್ಷ ಕೊಂಡಿರ ಕೆ. ನಾಣಯ್ಯ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ವಹಿಸಿಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಜ್ಯೋತಿನಿವಾಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಕಾಂಡAಡ ಉಷಾ ಜೋಯಪ್ಪ ಪಾಲ್ಗೊಳ್ಳಲಿದ್ದಾರೆ.

ಈ ದಿನ ಸಾಂಸ್ಕೃತಿಕ ಸ್ಪರ್ಧೆಗಳಾದ ಕೊಡವ ಪಾಟ್, ಬಾಳೋ ಪಾಟ್, ತಾಲಿ ಪಾಟ್, ಸಮ್ಮಂಧ ಅಡ್‌ಕುವ, ಕಪ್ಪೆಯಾಟ್ ಸಾರ್ವಜನಿಕರ ಗಮನ ಸೆಳೆಯಲಿದೆ.

ತಾ. ೪ ರಂದು ವಿವಿಧ ಸ್ಪರ್ಧೆಗಳು ಪ್ರಾರಂಭವಾಗಲಿದ್ದು, ಬೆಳಿಗ್ಗೆ ೧೦ ಗಂಟೆಗೆ ಉಮ್ಮತಾಟ್, ಬೊಳಕಾಟ್, ಕೋಲಾಟ್, ಪರಿಯಕಳಿ, ವಾಲಗತಾಟ್ ನಡೆಯಲಿದೆ. ಮಧ್ಯಾಹ್ನ ೨ ಗಂಟೆಗೆ ಊರೊರೊರ್ಮೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕೊಡವ ನ್ಯಾಷನಲ್ ಕೌನ್ಸಿಲ್‌ನ ಅಧ್ಯಕ್ಷ ನಂದಿನೆರವAಡ ಯು. ನಾಚಪ್ಪ ಪಾಲ್ಗೊಳ್ಳಲಿದ್ದಾರೆ.

ಕಾಫಿ ಬೆಳೆಗಾರ ಹಾಗೂ ಉದ್ಯಮಿ ಅಪ್ಪಾರಂಡ ಎಸ್. ಸುರೇಶ್ ಚಂಗಪ್ಪ ಮಂಗಲಕಾರAಡ ಕೋಂಬರೆ ಉದ್ಘಾಟಿಸಲಿದ್ದಾರೆ.