ನಾಪೋಕ್ಲು, ಏ. ೨: ನಾಪೋಕ್ಲು ಕೊಡವ ಸಮಾಜದ ಪೊನ್ನಾಡ್ ಸಂಸ್ಥೆಯ ವತಿಯಿಂದ ಪಟ್ಟಣದಲ್ಲಿ ನೂತನವಾಗಿ ಆರಂಭಿಸಲಾದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಜನೌಷಧಿ ಯೋಜನೆ ಪ್ರಧಾನಿ ನರೇಂದ್ರ ಮೋದಿ ಅವರ ಕನಸು. ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ಔಷಧಿಗಳನ್ನು ವಿತರಿಸಲು ಜನೌಷಧ ಕೇಂದ್ರ ಸಹಕಾರಿಯಾಗಿದೆ. ಸಾಮಾನ್ಯ ವ್ಯಕ್ತಿಯ ಆರೋಗ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಆಯುಷ್ಮಾನ್ ಭಾರತ ಯೋಜನೆಯನ್ನು ಆರಂಭಿಸಿದ್ದಾರೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಕರ್ನಾಟಕ ವನವಾಸಿ ಕಲ್ಯಾಣ ಅಧ್ಯಕ್ಷ ಕಾವೇರಿಯಪ್ಪ ಮಾತನಾಡಿ, ಔಷಧ ಸೇವಿಸುವದರಿಂದ ಆರೋಗ್ಯ ದರದಲ್ಲಿ ಔಷಧಿಗಳನ್ನು ವಿತರಿಸಲು ಜನೌಷಧ ಕೇಂದ್ರ ಸಹಕಾರಿಯಾಗಿದೆ. ಸಾಮಾನ್ಯ ವ್ಯಕ್ತಿಯ ಆರೋಗ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಆಯುಷ್ಮಾನ್ ಭಾರತ ಯೋಜನೆಯನ್ನು ಆರಂಭಿಸಿದ್ದಾರೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಕರ್ನಾಟಕ ವನವಾಸಿ ಕಲ್ಯಾಣ ಅಧ್ಯಕ್ಷ ಕಾವೇರಿಯಪ್ಪ ಮಾತನಾಡಿ, ಔಷಧ ಸೇವಿಸುವದರಿಂದ ಆರೋಗ್ಯ ಯಾರಿಗೂ ಅನುಮಾನ ಬೇಡ ಎಂದು ತಿಳಿಸಿದರು.

ಎರಡನೇ ಬಾರಿಗೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳನ್ನು ಎಲ್ಲರೂ ಕಟ್ಟುನಿಟ್ಟಿನಿಂದ ಪಾಲಿಸುವದರ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ನಾಪೋಕ್ಲು ವಿಎಸ್‌ಎಸ್‌ಎನ್ ಬ್ಯಾಂಕ್ ಅಧ್ಯಕ್ಷ ಅರೆಯಡ ಅಶೋಕ್, ಬಲ್ಲಮಾವಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಣವಟ್ಟೀರ ಹರೀಶ್ ಕುಶಾಲಪ್ಪ ಇದ್ದರು. ಮುಕ್ಕಾಟಿರ ವಿನಯ್ ನಿರೂಪಿಸಿ, ಕುಲ್ಲೇಟಿರ ಅಜಿತ್ ನಾಣಯ್ಯ ವಂದಿಸಿದರು.