ಮಡಿಕೇರಿ, ಏ. ೧: ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ೨೦೧೯ನೇ ಸಾಲಿನಲ್ಲಿ ಖಾಲಿ ಇದ್ದ ಸಿವಿಲ್, ಮಹಿಳಾ ಮತ್ತು ಸಶಸ್ತç ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಸಂಬAಧ ಲಿಖಿತ ಪರೀಕ್ಷೆಗೆ ಹಾಜರಾಗಿ ೧:೫ ರ ಅನುಪಾತದಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಈಗಾಗಲೇ ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗಳನ್ನು ನಡೆಸಲಾಗಿದ್ದು, ಅರ್ಹಗೊಂಡ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ತಯಾರಿಸಲು ಕೊಡಗು ಜಿಲ್ಲಾ ಪೊಲೀಸ್ ನೇಮಕಾತಿ ಸಮಿತಿ ಸದಸ್ಯರನ್ನೊಳಗೊಂಡ ಸಭೆಯು ನಡೆದಿದ್ದು, ೨೦೧೯ನೇ ಸಾಲಿನ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ -೬೨ ಹುದ್ದೆಗಳು, ಮಹಿಳಾ ಪೊಲೀಸ್ ಕಾನ್ಸಟೇಬಲ್-೧೬ ಹುದ್ದೆಗಳು ಮತ್ತು ಸಶಸ್ತç ಪೊಲೀಸ್ ಕಾನ್ಸಟೇಬಲ್-೫೩ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪೊಲೀಸ್ ನೇಮಕಾತಿ ಸಮಿತಿಯ ಅಧ್ಯಕ್ಷರು ಮತ್ತು ಪೊಲೀಸ್ ಅಧೀಕ್ಷಕಿ ಕ್ಷಮಾ ಮಿಶ್ರಾ ಅವರು ತಿಳಿಸಿದ್ದಾರೆ.