ಕೂಡಿಗೆ, ಏ. ೪: ನೀರು ನಮ್ಮ ಅಮೂಲ್ಯ ಸಂಪತ್ತು. ಪ್ರತಿಯೊಬ್ಬರೂ ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಕೆ ಮಾಡುವ ಮೂಲಕ ಸಂರಕ್ಷಿಸಬೇಕಿದೆ ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯ ಪ್ರಾಂಶುಪಾಲ ಎ. ಶ್ರೀಧರನ್ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ರಾಷ್ಟಿçÃಯ ಹಸಿರು ಪಡೆ, ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್ ಆಶ್ರಯದಲ್ಲಿ ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವಿಶ್ವ ಜಲ ದಿನದ ಅಂಗವಾಗಿ ಏರ್ಪಡಿಸಿದ್ದ ಜಲ ಸಂರಕ್ಷಣಾ ಜನಜಾಗೃತಿ ಅಭಿಯಾನದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನುಷ್ಯನಿಗೆ ಗಾಳಿಯಂತೆಯೇ ನೀರು ಅತಿ ಅಮೂಲ್ಯ ಎಂದರು.
'ಜಲ ಸಂರಕ್ಷಣೆ' ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್, ನೀರಿನ ಮಹತ್ವ, ನೀರಿನ ಮಿತಬಳಕೆ ಹಾಗೂ ನೀರಿನ ಸಂರಕ್ಷಣೆ ಕುರಿತು ಮಾಹಿತಿ ನೀಡಿದರು.
ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ.ವಿ. ಸುರೇಶ್, ಜಲ ಸಂರಕ್ಷಣೆ ಕುರಿತ ಘೋಷಣೆಗಳುಳ್ಳ ಫಲಕಗಳನ್ನು ಬಿಡುಗಡೆಗೊಳಿಸಿದರು. ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕಿ ಬಿ.ಬಿ. ಸಾವಿತ್ರಿ, ಉಪನ್ಯಾಸಕರಾದ ವಿ. ವಿಜಯ್, ಕೆ.ಜಿ. ನೀಲಕಂಠಪ್ಪ, ಸಿದ್ದೇಶ್ ಕುಮಾರ್, ಧನಂಜಯ್, ಗೀತಾ, ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಿ.ಎಂ. ಹೇಮಂತ್, ಇಸಿಓ ಕೆ.ಬಿ. ರಾಧಾಕೃಷ್ಣ, ಡಿ.ಎಡ್., ಪ್ರಶಿಕ್ಷಣಾರ್ಥಿಗಳು ಇದ್ದರು.
ನಂತರ ನಡೆದ ಜಾಗೃತಿ ಅಭಿಯಾನದಲ್ಲಿ ಪ್ರಶಿಕ್ಷಣಾರ್ಥಿಗಳು ಜಲ ಸಂರಕ್ಷಣೆ ಕುರಿತಂತೆ ಪರಿಸರ ಘೋಷಣಾ ಫಲಕಗಳನ್ನು ಹಿಡಿದು ಜನಜಾಗೃತಿ ಮೂಡಿಸಿದರು.