ಮಡಿಕೇರಿ, ಏ.೩: ಜಿಲ್ಲೆಯಲ್ಲಿ ಕೋವಿಡ್ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಾ. ೨೦ರವರೆಗೆ ಹಲವು ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕ ಹಿತಾಸಕ್ತಿಯಿಂದ ದಂಡ ಪ್ರಕ್ರಿಯಾ ಸಂಹಿತೆ ೧೯೭೩ ರ ಕಲಂ ೧೪೪ ರಡಿ ಹಾಗೂ ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಆಕ್ಟ್ ೨೦೦೫ ರ ಪ್ರದತ್ತವಾದ ಅಧಿಕಾರದಂತೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಆದೇಶ ಹೊರಡಿಸಿದ್ದಾರೆ.

ಆದೇಶದ ಮಾಹಿತಿ ಇಂತಿದೆ: ವಿದ್ಯಾಗಮವೂ ಸೇರಿದಂತೆ ೬ ರಿಂದ ೯ನೇ ತರಗತಿಗಳನ್ನು ಸ್ಥಗಿತಗೊಳಿ¸ Àಲಾಗಿದೆ. ೧೦, ೧೧ ಹಾಗೂ ೧೨ನೇ ತರಗತಿಗಳು ಪ್ರಸ್ತುತ ಇರುವಂತೆಯೇ ಮುಂದುವರೆಯುತ್ತವೆ. ಆದರೂ ತರಗತಿಗಳಿಗೆ ವಿದ್ಯಾರ್ಥಿಗಳ ಹಾಜ ರಾತಿ ಕಡ್ಡಾಯವಲ್ಲ.

ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್ಗಳ ತರಗತಿಗಳಲ್ಲಿ ಮಂಡಳಿಯ / ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವ ಹಾಗೂ ವೈದ್ಯಕೀಯ ಶಿಕ್ಷಣದ ತರಗತಿ ಹೊರತುಪಡಿಸಿ, ಇತರ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.

ವಸತಿ ಶಾಲೆಗಳು ಹಾಗೂ ಬೋರ್ಡಿಂಗ್ ಇರುವ ಶಾಲೆಗಳಲ್ಲಿ ೧೦, ೧೧ ಹಾಗೂ ೧೨ ನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್ಗಳ ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವವರು ಮತ್ತು ವೈದ್ಯಕೀಯ ಶಿಕ್ಷಣದ ತರಗತಿ (ಮೊದಲ ಪುಟದಿಂದ) ಹೊರತುಪಡಿಸಿ, ಇತರ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.

ಧಾರ್ಮಿಕ ಸ್ಥಳಗಳಲ್ಲಿ ವೈಯಕ್ತಿಕವಾಗಿ ಪ್ರಾರ್ಥನೆ ಮಾಡಲು ಅವಕಾಶವಿದೆ, ಆದರೆ ಗುಂಪು ಸೇರುವ ಕಾರ್ಯಕ್ರಮಗಳಿಗೆ ಅವಕಾಶವಿರುವುದಿಲ್ಲ. ಅಪಾರ್ಟ್ ಮೆಂಟ್ ಕಾಂಪ್ಲೆಕ್ಸ್ಗಳಲ್ಲಿ, ಸಾಮಾನ್ಯ ವಾಗಿ ನಿವಾಸಿಗಳು/ ಜನರು ಸೇರುವ ಸ್ಥಳಗಳಾದ ಜಿಮ್, ಪಾರ್ಟಿ ಹಾಲ್‌ಗಳು/ ಕ್ಲಬ್ ಹೌಸ್‌ಗಳು, ಈಜುಕೊಳ ಮುಚ್ಚಲ್ಪಟ್ಟಿರುತ್ತವೆ. ಜಿಲ್ಲೆಯ ಎಲ್ಲಾ ಜಿಮ್‌ಗಳು ಹಾಗೂ ಈಜುಕೊಳ ಮುಚ್ಚಲ್ಪಡುತ್ತವೆ. ಯಾವುದೇ ತರಹದ ರ‍್ಯಾಲಿಗಳು, ಮುಷ್ಕರ, ಧರಣಿಗಳನ್ನು ನಿಷೇಧಿಸ ಲಾಗಿದೆ. ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಕರ ಸಂಖ್ಯೆಯು ನಿಗಧಿ ಪಡಿಸಿರುವ ಆಸನದ ವ್ಯವಸ್ಥೆಯನ್ನು ಮೀರುವಂತಿಲ್ಲ. ಕಚೇರಿಗಳು ಹಾಗೂ ಇತರ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ನಿರ್ವಹಿಸುವ ಅಭ್ಯಾಸ/ ವ್ಯವಸ್ಥೆಯನ್ನು ಪಾಲಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುನ್ನಚ್ಚರಿಕೆಗಾಗಿ ಕಡ್ಡಾಯವಾಗಿ ಮುಖಗವಸು ಧರಿಸಿ, ದೈಹಿಕ ಅಂತರ ಪಾಲನೆ, ಹ್ಯಾಂಡ್ ಸ್ಯಾನಿಟೈಸರ್, ಹ್ಯಾಂಡ್ ವಾಷ್‌ಗಳ ಬಳಕೆಯನ್ನು ಮಾಡಬೇಕು. ಇದರ ಉಲ್ಲಂಘನೆಯು ದಂಡನೀಯವಾಗಿದೆ.

ಶಾಪಿಂಗ್ ಮಾಲ್‌ಗಳು, ಮುಚ್ಚಿದ ಪ್ರದೇಶಗಳಲ್ಲಿರುವ ಮಾರ್ಕೆಟ್‌ಗಳು ಹಾಗೂ ಡಿಪಾರ್ಟ್ಮೆಂಟಲ್ ಸ್ಟೋರ್‌ಗಳಲ್ಲಿ ಶಿಷ್ಠಾಚಾರದನ್ವಯ ಕೋವಿಡ್ ಮುನೆÀ್ನಚ್ಚರಿಕೆಗಾಗಿ ಕಡ್ಡಾಯವಾಗಿ ಮುಖಗವಸು, ದೈಹಿಕ ಅಂತರ ಪಾಲನೆ, ಹ್ಯಾಂಡ್ ಸ್ಯಾನಿಟೈಸರ್, ಹ್ಯಾಂಡ್ ವಾಷ್‌ಗಳ ಬಳಕೆ ಮಾಡಬೇಕು. ಉಲ್ಲಂಘಿಸಿದಲ್ಲಿ ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಕೊನೆಗೊಳ್ಳುವವರೆಗೂ ಮುಚ್ಚಲಾಗು ವುದು. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು ಹಾಗೂ ಜಾತ್ರೆ ಮಹೋತ್ಸವಗಳು, ಮೇಳಗಳು, ಗುಂಪು ಸೇರುವುದನ್ನು ನಿಷೇಧಿಸಿದೆ. ವಿವಿಧ ಸಭೆ / ಸಮಾರಂಭ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶ ನೀಡಬಹುದಾದ ಸಾರ್ವಜನಿಕರ ಸಂಖ್ಯೆಯನ್ನು ಸರ್ಕಾರದ ಈ ಹಿಂದಿನ ಆದೇಶದಂತೆ ಯಥಾವತ್ತಾಗಿ ಮುಂದುವರೆಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್/ ಮುಖಗವಸು ಧರಿಸುವುದು ಹಾಗೂ ದೈಹಿಕ ಅಂತರ ಕಾಪಾಡುವುದು, ಇವುಗಳಿಗೆ ಸಂಬAಧಿಸಿದAತೆ ಈಗಾಗಲೇ ಜಾರಿಯಲ್ಲಿರುವ ನಿಯಮ / ಆದೇಶಗಳನ್ನು ಪೊಲೀಸ್ ಹಾಗೂ ಸ್ಥಳೀಯ ಕಾರ್ಯವ್ಯಾಪ್ತಿಯ ಆಡಳಿತಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು.

ಈ ಆದೇಶದ ಉಲ್ಲಂಘನೆಯು ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ರ ವಿಭಾಗ ೫೧ ರಿಂದ ೬೦ ಅನ್ವಯ ಐಪಿಸಿ ಸೆಕ್ಷನ್ ೧೮೮ ರಂತೆ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ೨೦೨೦ರ ವಿಭಾಗ ೪, ೫ ಮತ್ತು ೧೦ ರಂತೆ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತ ಸೋಮಲ್ ಆದೇಶದಲ್ಲಿ ತಿಳಿಸಿದ್ದಾರೆ.