ಸಿದ್ದಾಪುರ, ಏ. ೩: ಜಾಗದ ವಿಚಾರವೊಂದರಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ದೇವಾಲಯ ಸಮಿತಿಯ ಉಪಾಧ್ಯಕ್ಷರ ನಡುವೆ ಕಲಹ ನಡೆದು ಉಭಯ ಕಡೆಗಳ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾಬು ವರ್ಗೀಸ್ ಹಾಗೂ ನೆಲ್ಲಿಹುದಿಕೇರಿ ಗ್ರಾಮದ ಶ್ರೀ ಸತ್ಯನಾರಾಯಣ ದೇವಾಲಯದ ಉಪಾಧ್ಯಕ್ಷ ಟಿ.ಜಿ ಚಂದ್ರಶೇಖರ್ ನಡುವೆ ಜಾಗವೊಂದರ ವಿಚಾರದಲ್ಲಿ ಪರಸ್ಪರ ಕಲಹ ನಡೆಯಿತು ಎಂದು ಉಭಯ ಕಡೆಯವರು ಸಿದ್ದಾಪುರ ಪೊಲೀಸ್ ಠಾಣೆಗೆ ಪುಕಾರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.