ಬೆಂಗಳೂರಿನಲ್ಲಿ ೪,೩೭೩ ಮಂದಿಗೆ ಪಾಸಿಟಿವ್, ೧೯ ಸಾವು

ಬೆಂಗಳೂರು, ಏ. ೩: ರಾಜ್ಯದಲ್ಲಿ ಕೊರೊನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಇಂದು ೪,೩೭೩ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ ೧೦,೧೦,೬೦೨ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ ೨೪ ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿAದ ೧೯ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ೧೨,೬೧೦ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ೩,೦೦೨ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ ೪,೪೪,೨೪೪ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ೬ ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಇಂದು ೧,೯೫೯ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿAದ ಚೇತರಿಸಿಕೊಂಡವರ ಸಂಖ್ಯೆ ೯,೬೧,೩೫೯ಕ್ಕೆ ಏರಿಕೆಯಾಗಿದೆ. ಇನ್ನು ೩೬,೬೧೪ ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ ೩೨೭ ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಂದೇ ಬಾರಿಗೆ ಎರಡು ಡೋಸ್ ಕೊರೊನಾ ಲಸಿಕೆ ನೀಡಿದ ಸಿಬ್ಬಂದಿ

ಕಾನ್ಪುರ್, ಏ. ೩: ಆರೋಗ್ಯ ಕಾರ್ಯಕರ್ತೆಯೊಬ್ಬರು ಮೊಬೈಲ್‌ನಲ್ಲಿ ಮಾತನಾಡುತ್ತಲೇ ಮಹಿಳೆಯೊಬ್ಬರಿಗೆ ಒಂದೇ ಬಾರಿ ಎರಡು ಡೋಸ್ ಕೊರೊನಾ ಲಸಿಕೆ ಹಾಕಿದ ಘಟನೆ ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯ ಅಕ್ಬರ್ಪುರ್ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಆರೋಗ್ಯ ಕಾರ್ಯಕರ್ತೆ ಅರ್ಚನಾ ಅವರು ೫೦ ವರ್ಷದ ಕಮಲೇಶ್ ಕುಮಾರಿ ಎಂಬ ಮಹಿಳೆಗೆ ಒಂದೇ ಬಾರಿಗೆ ಎರಡು ಡೋಸ್ ಲಸಿಕೆ ನೀಡಿದ್ದಾರೆ. ಲಸಿಕೆ ನೀಡುತ್ತಿದ್ದ ವೇಳೆ ಆರೋಗ್ಯ ಕಾರ್ಯಕರ್ತೆ ದೂರವಾಣಿ ಕರೆಯಲ್ಲಿದ್ದರು ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಈ ಸುದ್ದಿ ಮಹಿಳೆಯ ಕುಟುಂಬ ಸದಸ್ಯರಿಗೆ ತಲುಪುತ್ತಿದ್ದಂತೆ, ಲಸಿಕಾ ಕೇಂದ್ರಕ್ಕೆ ಆಗಮಿಸಿ ಗಲಾಟೆ ಮಾಡಿದರು. ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯ ವೈದ್ಯಕೀಯ ಅಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆರೋಗ್ಯ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಮಾಹಿತಿ ನೀಡಲಾಯಿತು ಎಂದು ಅವರು ಹೇಳಿದ್ದಾರೆ. ಕಮಲೇಶ್ ಕುಮಾರಿ ತನಗೆ ಎರಡು ಬಾರಿ ಏಕೆ ಲಸಿಕೆ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆದರೆ ಅರ್ಚನಾ ತನ್ನ ತಪ್ಪಿಗೆ ಕ್ಷಮೆಯಾಚಿಸುವ ಬದಲು ಮಹಿಳೆಯನ್ನೇ ಗದರಿಸಿ ಕಳುಹಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಎರಡು ಬಾರಿ ಲಸಿಕೆ ಹಾಕಿದ್ದರಿಂದ ಕುಮಾರಿ ಅವರ ಕೈ ಊದಿಕೊಂಡಿದೆ, ಆದರೆ ಯಾವುದೇ ಗಂಭೀರ ಸಮಸ್ಯೆಯಾಗಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಸಿಬ್ಬಂದಿಯ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಘಟನೆಯ ಬಗ್ಗೆ ಶನಿವಾರ ಸಂಜೆ ವೇಳೆಗೆ ವರದಿ ನೀಡುವಂತೆ ಸಿಎಂಒಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟೆçÃಟ್ ಜಿತೇಂದ್ರ ಪ್ರತಾಪ್ ಸಿಂಗ್ ಅವರು ಹೇಳಿದ್ದಾರೆ.

ವಾಂಖೇಡೆ ಕ್ರೀಡಾಂಗಣದ ೮ ಸಿಬ್ಬಂದಿಗೆ ಕೋವಿಡ್ ಸೋಂಕು

ಮುAಬೈ, ಏ. ೩: ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಎಂದೇ ಕರೆಯಲಾಗುವ ಇಂಡಿಯನ್ ಪ್ರೀಮಿಯರ್ ಲೀU ನ ೧೪ನೇ ಆವೃತ್ತಿಗೂ ಮುನ್ನವೇ ಆಘಾತ ಎದುರಾಗಿದ್ದು, ಮುಂದಿನ ಆವೃತ್ತಿಗೆ ಸಿದ್ಧತೆಗಳು ಭರದಿಂದ ಸಾಗಿರುವಂತೆಯೇ ಮುಂಬೈನ ವಾಂಖೆಡೆ ಕ್ರಿಕೆಟ್ ಮೈದಾನದ ಸಿಬ್ಬಂದಿಗಳಿಗೆ ಸೋಂಕು ತಗುಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕೆಲಸ ಮಾಡುವ ಒಟ್ಟು ೮ ಮಂದಿ ಸಿಬ್ಬಂದಿಗಳು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಐಪಿಎಲ್ ಟೂರ್ನಿಗೆ ದಿನಗಣನೆ ಆರಂಭವಾಗಿರುವAತೆ ಎಲ್ಲ ಮೈದಾನದ ಸಿಬ್ಬಂದಿಗಳು ಕೋಚ್‌ಗಳು ಮತ್ತು ಇತರ ಸಿಬ್ಬಂದಿಗಳನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗುತ್ತಿದ್ದು, ಈ ಪೈಕಿ ನಿನ್ನೆ ಮುಂಬೈನ ವಾಂಖೆಡೆ ಕ್ರೀಡಾಂಗಣದ ಸಿಬ್ಬಂದಿಗಳನ್ನೂ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ೮ ಮಂದಿ ಸಿಬ್ಬಂದಿಗಳಲ್ಲಿ ಸೋಂಕು ದೃಢಪಟ್ಟಿದೆ. ವಾಂಖೆಡೆ ಸ್ಟೇಡಿಯಂನಲ್ಲಿರುವ ಎಲ್ಲಾ ೧೯ ಸಿಬ್ಬಂದಿಗಳು ಕಳೆದ ವಾರ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಿದ್ದರು. ಮಾರ್ಚ್ ೨೬ ರಂದು ನಡೆಸಲಾದ ಪರೀಕ್ಷೆಯಲ್ಲಿ ಮೂವರಿಗೆ ಕೊರೊನಾ ಇರುವುದು ಕಂಡು ಬಂದಿತ್ತು. ಏಪ್ರಿಲ್ ೧ ರಂದು ಇನ್ನೂ ೫ ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.

೫ ಮಂದಿ ಭದ್ರತಾ ಸಿಬ್ಬಂದಿಗಳು ಹುತಾತ್ಮ

ಬಿಜಾಪುರ್, ಏ. ೩: ಛತ್ತೀಸ್‌ಘಡದಲ್ಲಿ ಭೀಕರ ನಕ್ಸಲ್ ಎನ್‌ಕೌಂಟರ್ ನಡೆದಿದ್ದು, ಘಟನೆಯಲ್ಲಿ ಐದು ಮಂದಿ ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಛತ್ತೀಸ್‌ಘಡದ ಬಿಜಾಪುರ ಜಿಲ್ಲೆಯ ಟರ್ರೇಮ್ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಎನ್‌ಕೌಂಟರ್‌ನಲ್ಲಿ ಐದು ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆಯಷ್ಟೇ ಡಿಜಿಪಿ ಅವಸ್ಥಿ ಅವರು ಸುದ್ದಿಗೋಷ್ಠಿ ಕರೆದು ಓರ್ವ ಭದ್ರತಾ ಸಿಬ್ಬಂದಿ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದರು. ಆದರೆ ಈ ಸಂಖ್ಯೆ ಇದೀಗ ೫ಕ್ಕೆ ಏರಿಕೆಯಾಗಿದೆ. ಇನ್ನು ಕೇವಲ ಭದ್ರತಾ ಪಡೆಗಳಲ್ಲಿ ಮಾತ್ರವಲ್ಲ ನಕ್ಸಲರ ಪಾಳಯದಲ್ಲೂ ಭಾರಿ ಸಾವು-ನೋವು ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಸ್ತುತ ಎನ್‌ಕೌಂಟರ್ ಪ್ರಗತಿಯಲ್ಲಿರುವುದರಿಂದ ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆದರೆ ಕನಿಷ್ಟ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ಹೇಳಲಾಗಿದೆ.

ಐದು ಗುಂಡುಗಳಿದ್ದ ಚೀಲ ಪತ್ತೆ: ಆರೋಪಿಗಾಗಿ ಶೋಧ

ಕೊಚ್ಚಿನ್, ಏ. ೩: ಕೇರಳದ ಅತಿದೊಡ್ಡ ಶಾಪಿಂಗ್ ಮಾಲ್‌ಗಳಲ್ಲಿ ಒಂದಾದ ಲುಲು ಮಾಲ್‌ನ ಟ್ರಾಲಿಯಲ್ಲಿ ಪಿಸ್ತೂಲ್ ಮತ್ತು ಐದು ಗುಂಡುಗಳನ್ನು ಬಿಟ್ಟಿದ್ದ ವ್ಯಕ್ತಿಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ. ಮಾಲ್‌ನ ಪ್ರವೇಶ ಸಂಖ್ಯೆ ಒಂದರ ಬಳಿ ಟ್ರಾಲಿಯೊಂದರಲ್ಲಿ ಚೀಲವೊಂದು ಇರುವುದನ್ನು ಸಿಬ್ಬಂದಿ ಗಮನಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಪಿಸ್ತೂಲ್ ಮತ್ತು ಗುಂಡುಗಳನ್ನು ಹೊಂದಿರುವ ಬಟ್ಟೆಯ ಚೀಲವನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಟ್ರಾಲಿಯಲ್ಲಿ ಪ್ಯಾಕೇಜ್ ಬಿಟ್ಟು ಹೋದ ವ್ಯಕ್ತಿ ಓರ್ವ ವೃದ್ಧನಾಗಿದ್ದು ಈತ ಚೀಲವನ್ನು ಅಲ್ಲಿ ಬಿಟ್ಟು ಪಲಾಯನ ಮಾಡಿರುವುದು ಕಂಡು ಬಂದಿದೆ. ಕಳಮಸ್ಸೇರಿ ಪೊಲೀಸ್ ಠಾಣೆಯ ತಂಡವೊAದು ವ್ಯಕ್ತಿಯನ್ನು ಪತ್ತೆಹಚ್ಚುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಪಿಸ್ತೂಲಿನ ಪ್ರಾಥಮಿಕ ಪರಿಶೀಲನೆಯ ವೇಳೆ ಅದು ಹಾನಿಗೊಂಡಿರುವುದು ಪತ್ತೆಯಾಗಿದೆ. ವ್ಯಕ್ತಿಯು ಆವರಣದಿಂದ ಹೊರಬಂದು ಕಾರಿನಲ್ಲಿ ಕುಳಿತು ಹೋದದ್ದನ್ನೂ ಸಹ ಪೊಲೀಸರು ಗುರುತಿಸಿದ್ದಾರೆ.