ಮಡಿಕೇರಿ, ಏ. ೪: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕೊಡಗು ಜಿಲ್ಲೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಗುಲಾಬಿ ಆಂದೋಲನ ನಡೆಯಿತು.

ಈ ಆಂದೋಲನದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮಾ ಧಿಕಾರಿ ಡಾ. ಗೋಪಿನಾಥ್ ಅವರು ಆಂದೋಲನವನ್ನು ಉದ್ಘಾಟಿಸಿ ಗುಲಾಬಿ ಆಂದೋಲನದ ಬಗ್ಗೆ ಮಾಹಿತಿ ನೀಡಿದರು.

ಆಶಾ ಕಾರ್ಯಕರ್ತರು, ಆರೋಗ್ಯ ಸಹಾಯಕಿಯರು, ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು. ಗುಲಾಬಿ ಆಂದೋಲನ ಜಾಥಾ ಕಾರ್ಯಕ್ರಮವು ನಗರದ ಸರ್ಕಾರಿ ಪ್ರೌಢಶಾಲೆ ಮುಂಭಾಗದಿAದ ಹೊರಟು ಸರ್ಕಾರಿ ಬಸ್ ನಿಲ್ದಾಣ, ಹಾಗೂ ಖಾಸಗಿ ಬಸ್ ನಿಲ್ದಾಣ, ಮಾರುಕಟ್ಟೆ ರಸ್ತೆ ಮಾರ್ಗವಾಗಿ ಸಾಗಿತು. ಕೋಟ್ಪಾ ೨೦೦೩ (ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ ೨೦೦೩)ರ ಕುರಿತು ಜಾಗೃತಿ ಮೂಡಿಸಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತರು, ಆರೋಗ್ಯ ಸಹಾಯಕಿಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಗುಲಾಬಿ ಹೂ ನೀಡುವುದರ ಮುಖಾಂತರ ತಂಬಾಕಿನ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿದರು.