ನಾಪೋಕ್ಲು, ಏ. ೩: ನಾಪೋಕ್ಲು ವ್ಯಾಪ್ತಿಗೆ ಒಳಪಟ್ಟ ಗ್ರಾಮಗಳ ನಡುವೆ ನಾಪೋಕ್ಲು ಕೊಡವ ಸಮಾಜದ ವತಿಯಿಂದ ಆಯೋಜಿಸಿರುವ ‘ಊರೋರ್ಮೆ - ಸಂಸ್ಕೃತಿರ ಆಯಿಮೆ’ ಸಾಂಸ್ಕೃತಿಕ ಪೈಪೋಟಿಯನ್ನು ಸಮಾಜ ಸೇವಕ ಹಾಗೂ ನಾಪೋಕ್ಲು ಭಗವತಿ ದೇವಳದ ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಕುಲ್ಲೇಟಿರ ಎಸ್. ಮಾದಪ್ಪ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ನಿವೃತ್ತ ಪ್ರಾಧ್ಯಾಪಕಿ ಕಾಂಡAಡ ಉಷಾ ಜೋಯಪ್ಪ ಮಾತನಾಡಿ, ಎಲ್ಲಾ ಗ್ರಾಮದವರ ಪ್ರತಿಭೆ ಅನಾವರಣ ಹಾಗೂ ಕಲಿಕೆಗೆ ಈ ಕಾರ್ಯಕ್ರಮದ ಮೂಲಕ ಅವಕಾಶ ಮಾಡಿಕೊಟ್ಟ ನಾಪೋಕ್ಲು ಕೊಡವ ಸಮಾಜದ ಕಾರ್ಯ ಶ್ಲಾಘನೀಯ ಎಂದರು.

ಕೊಡವ ತಿಂಡಿ, ತಿನಿಸುಗಳ ಬಗ್ಗೆ ಮಕ್ಕಳಿಗೆ ಅರಿವಿಕೆ ನೀಡಬೇಕು. ಇಂದು ಸಣ್ಣ ಸಂಸಾರ ಪದ್ಧತಿ ಇರುವದರಿಂದ ಮಕ್ಕಳಿಗೆ ನಮ್ಮ ಸಂಸ್ಕೃತಿಯನ್ನು ಕಲಿಯಲು ಸಾಧ್ಯವಾಗುತ್ತಿಲ್ಲ. ಕೊಡವ ಸಮಾಜಗಳು ಕೊಡವ ಕಾರ್ಯಕ್ರಮಗಳನ್ನು ಅಯೋಜಿಸಿ ಮಕ್ಕಳು ಅದರಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಇದು ಎರಡನೇ ವರ್ಷದ ಸಾಂಸ್ಕೃತಿಕ ಹಬ್ಬ. ನವೆಂಬರ್‌ನಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮ ಕೋವಿಡ್‌ನಿಂದಾಗಿ ತಡವಾಗಿ ನಡೆಯುತ್ತಿದೆ. ಪೈಪೋಟಿಯಲ್ಲಿ ಸೋಲು, ಗೆಲುವು ಸಹಜ. ಎಲ್ಲಾ ತಂಡದವರು ಇದನ್ನು ಸಮಾನವಾಗಿ ಪರಿಗಣಿಸಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಂಗವಾಗಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯ ಉದ್ಘಾಟನೆಯನ್ನು ನಾಪೋಕ್ಲು ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಕೊಂಡಿರ ಕೆ. ನಾಣಯ್ಯ ನೆರವೇರಿಸಿದರು.

ಕೊಡವ ಪಾಟ್, ಬಾಳೋಪಾಟ್, ತಾಲಿಪಾಟ್, ಸಂಬAಧ ಅಡಿಕುವೊ, ಕಪ್ಪೆಯಾಟ್ ಸ್ಪರ್ಧೆಗಳನ್ನು ನಡೆಸಲಾಯಿತು. ತಾ. ೪ ರಂದು ಉಮ್ಮತ್ತಾಟ್, ಬೊಳ್‌ಕಾಟ್, ಕೋಲಾಟ್, ಪರಿಯಕಳಿ, ವಾಲಗತ್ತಾಟ್ ಸ್ಪರ್ಧೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ನರಿಯಂದಡ ಹಾಗೂ ಪಾರಾಣೆ ಗ್ರಾಮ ಪಂಚಾಯಿತಿಯಲ್ಲಿ ಆಯ್ಕೆಯಾದ ಕೊಡವ ಸಮಾಜದ ಸದಸ್ಯರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ನಾಪೋಕ್ಲು ಕೊಡವ ಸಮಾಜದ ನಿರ್ದೇಶಕರು ಹಾಜರಿದ್ದರು

ಕಲಿಯಂಡ ಬೀನಾ ಅಯ್ಯಣ್ಣ ಪ್ರಾರ್ಥಿಸಿ, ಕೊಡವ ಸಮಾಜದ ಉಪಾಧ್ಯಕ್ಷ ಮಾಳೆಯಂಡ ಅಯ್ಯಪ್ಪ ಸ್ವಾಗತಿಸಿದರು. ಬಾಳೆಯಡ ದಿವ್ಯಾ ಮಂದಪ್ಪ ನಿರೂಪಿಸಿ, ಮಾಚೆಟ್ಟಿರ ಕುಶು ಕುಶಾಲಪ್ಪ ವಂದಿಸಿದರು.