ಮಡಿಕೇರಿ, ಏ. ೩: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್‌ನ ಮಡಿಕೇರಿಯ ನೂತನ ಶಾಖೆಯ ಉದ್ಘಾಟನೆ ತಾ. ೫ ರಂದು ಮಧ್ಯಾಹ್ನ ೨ ಗಂಟೆಗೆ ನಡೆಯಲಿದೆ. ಇಂದಿರಾ ಗಾಂಧಿ ವೃತ್ತದ ಹಮೀದ್ ಶಾಪ್ ಕಟ್ಟಡದ ೧ನೇ ಮಹಡಿಯಲ್ಲಿರುವ ಶಾಖೆಯನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಉದ್ಘಾಟಿಸುವರು.

ನಂತರ ಕಾವೇರಿ ಹಾಲ್‌ನಲ್ಲಿ ನಡೆಯಲಿರುವ ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾಂಕ್‌ನ ಅಧ್ಯಕ್ಷ ಹರೀಶ್ ದೇವಂಗೋಡಿ ವಹಿಸುವರು. ಮುಖ್ಯ ಅತಿಥಿಗಳಾಗಿ ಉಸ್ತುವಾರಿ ಸಚಿವ ವಿ.ಸೋಮಣ್ಣ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖಾ ಸಚಿವ ಎಸ್. ಸುರೇಶ್ ಕುಮಾರ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ಕೊಂಬಾರನ ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮನಾರಾಯಣ ಕಜೆಗದ್ದೆ, ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ. ಸಲೀಂ ಇನ್ನಿತರರು ಉಪಸ್ಥಿತರಿರುವರು.