ಶನಿವಾರಸAತೆ, ಏ. ೬: ಆಲೂರು ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲೋಹಿತ್ (೨೦) ಎಂಬಾತ ಅಪ್ರಾಪ್ತೆ (೧೭) ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿ ಮಾಡಿದ ವಿಚಾರ ತಿಳಿದ ಬಾಲಕಿಯ ತಾಯಿ ಶನಿವಾರಸಂತೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆ ಪ್ರಕರಣ ದಾಖಲಾಗಿದೆ. ಲೋಹಿತ್ ೧ ವರ್ಷದಿಂದ ಯುವತಿಯನ್ನು ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅತ್ಯಾಚಾರವೆಸಗಿದ್ದಾನೆ. ಶನಿವಾರಸಂತೆ ಪೊಲೀಸರಿಗೆ ನೀಡಿದ ಲಿಖಿತ ದೂರಿನ ಮೇರೆ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿ ಲೋಹಿತ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.