ಮಡಿಕೇರಿ, ಏ. ೬: ಆರನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ತಾ. ೭ ರಿಂದ (ಇಂದಿನಿAದ) ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲೂ ಕೂಡ ಸರ್ಕಾರಿ ಬಸ್‌ಗಳು ಸಂಚಾರ ಸ್ಥಗಿತಗೊಳಿಸಲಿವೆ. ಈ ಹಿಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಮುಷ್ಕರ ನಡೆಸಿದ್ದ ವೇಳೆ ನೌಕರರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆಯನ್ನು ನೀಡಿದ್ದ ಸರ್ಕಾರ, ಕೂಟದ ಬಹುಮುಖ್ಯ ಬೇಡಿಕೆಯಾದ ಆರನೇ ವೇತನ ಆಯೋಗದ ವರದಿ ಜಾರಿ ಮಾಡಲು ಮುಂದಾಗಿಲ್ಲ. ಆದ್ದರಿಂದ ಮತ್ತೊಮ್ಮೆ ಮುಷ್ಕರ ಹಮ್ಮಿಕೊಳ್ಳಬೇಕಾದ ಅನಿವಾರ್ಯತೆ ಇರುವುದರಿಂದ ತಾ. ೭ರಿಂದ (ಇಂದಿನಿAದ) ಹೋರಾಟ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಒಕ್ಕೂಟ ಕರಪತ್ರದ ಮೂಲಕ ಪ್ರಚಾರಪಡಿಸಿದೆ.

ಕೊಡಗಿನಲ್ಲೂ ಸಾರಿಗೆ ನೌಕರರ ಮುಷ್ಕರದ ಬಗ್ಗೆ ‘ಶಕ್ತಿ’ಯೊಂದಿಗೆ ಮಾತನಾಡಿದ ಡಿಪೋ ವ್ಯವಸ್ಥಾಪಕಿ ಗೀತಾ ಅವರು ಮುಷ್ಕರ ಆರಂಭ ವಾಗುವ ಒಂದು ದಿನ ಮುಂಚಿತ ವಾಗಿಯೇ

(ಮೊದಲ ಪುಟದಿಂದ) ಬಹಳಷ್ಟು ನೌಕರರು ಕರ್ತವ್ಯಕ್ಕೆ ಹಾಜರಾಗಿಲ್ಲ. ಒಂದು ವೇಳೆ ತಾ. ೭ರಂದು (ಇಂದು) ನೌಕರರು ಕರ್ತವ್ಯಕ್ಕೆ ಹಾಜರಾದರೆ ಬಸ್‌ಗಳು ರಸ್ತೆಗಳಿಯಲಿವೆ. ಇಲ್ಲವಾದರೆ ಸರ್ಕಾರಿ ಬಸ್ ಸಂಚಾರ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಸರ್ಕಾರಿ ಬಸ್ ನೌಕರರ ಮುಷ್ಕರದಿಂದಾಗಿ ಸಾರಿಗೆ ಸಂಸ್ಥೆಯ ಬಸ್‌ಗಳು ರಸ್ತೆಗಿಳಿಯದಿದ್ದರೆ ಒಪ್ಪಂದದ ಮೇರೆಗೆ ಸಂಚರಿಸುವ ಖಾಸಗಿ ಬಸ್‌ಗಳು ಎಂದಿನAತೆ ಮುಂದುವರೆಯಲಿವೆ. ಜಿಲ್ಲೆಯಲ್ಲಿರುವ ಖಾಸಗಿ ಬಸ್‌ಗಳು ತಮ್ಮ ಮಾಮೂಲಿ ಮಾರ್ಗಗಳಲ್ಲಿ ಸಂಚರಿಸುವುದರ ಜೊತೆಗೆ ಜಿಲ್ಲೆಯ ಒಳಗೆ, ಸರ್ಕಾರಿ ಬಸ್‌ಗಳು ಸಂಚರಿಸುವ ಮಾರ್ಗಗಳಲ್ಲೂ ಜನರಿಗೆ ತೊಂದರೆಯಾಗದAತೆ ಸೇವೆ ಒದಗಿಸಲು ಪ್ರಯತ್ನಿಸುತ್ತವೆ ಎಂದು ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ತಿಳಿಸಿದ್ದಾರೆ.