ಸರಳ ಆಚರಣೆಗೆ ನಿರ್ಧಾರ

ಮಡಿಕೇರಿ, ಏ. ೬: ರಾಜ್ಯಾದ್ಯಂತ ಕೋವಿಡ್ ಪರಿಣಾಮದಿಂದಾಗಿ ನಿರ್ಬಂಧಕಾಜ್ಞೆಯು ಜಾರಿಯಲ್ಲಿರುವುದರಿಂದ ಪ್ರತಿವರ್ಷ ನಡೆಸಿಕೊಂಡು ಬರುವ ಮಡಿಕೇರಿ ಶ್ರೀ ಮುತ್ತಪ್ಪ ದೇವಾಲಯದ ಶ್ರೀ ಮುತ್ತಪ್ಪ ಜಾತ್ರೆಯನ್ನು ಧಾರ್ಮಿಕ ಕಾರ್ಯಗಳೊಂದಿಗೆ ಸರಳವಾಗಿ ಆಚರಿಸಲು ದೇವಾಲಯ ಸಮಿತಿ ನಿರ್ಧರಿಸಿದೆ. ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ದೈವಿಕ ಕೋಲ ಕಾರ್ಯಕ್ರಮಗಳನ್ನು ಮಾತ್ರ ನಡೆಸಲಾಗುವುದು ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾ. ೮ ರಿಂದ ತಾ. ೧೦ ರವರೆಗೆ ಜಾತ್ರೆ ಸರಳವಾಗಿ ನಡೆಯಲಿದೆ. ತಾ. ೮ ರಂದು ಬೆಳಿಗ್ಗೆ ೬.೩೦ ಗಂಟೆಗೆ ಶ್ರೀ ಶಕ್ತಿಗಣಪತಿ ದೇವರಿಗೆ ೨೪ ತೆಂಗಿನ ಕಾಯಿಗಳ ಅಷ್ಟದ್ರವ್ಯ ಮಹಾಗಣಪತಿ ಹೋಮ, ೯ ಗಂಟೆಯಿAದ ಶ್ರೀ ಸುಬ್ರಹ್ಮಣ್ಯ ಮತ್ತು ಅಯ್ಯಪ್ಪ ದೇವರಿಗೆ ಅಷ್ಟಾಭಿಷೇಕ, ನಾಗದೇವರಿಗೆ ತಂಬೀಲ ಸೇವೆ ನಡೆಯಲಿದೆ. ಸಂಜೆ ೪ ಗಂಟೆಗೆ ಧ್ವಜಾರೋಹಣ, ೪.೩೦ ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಸಂಜೆ ೬ ಗಂಟೆಗೆ ಶ್ರೀ ಪಾರ್ವತಿ ದೇವಿಗೆ ಪುಷ್ಪಾರ್ಚನೆ ಹಾಗೂ ದೀಪಾರಾಧನೆ ಇನ್ನಿತರ ಪೂಜಾ ಕೈಂಕರ್ಯಗಳು ನಡೆಯಲಿವೆ.

ತಾ. ೯ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಶ್ರೀ ಮುತ್ತಪ್ಪ ದೇವರ ಕಲಶ ಪ್ರತಿಷ್ಠೆ, ಸಂಜೆ ೪ ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವುದು, ೪-೩೦ ಗಂಟೆಗೆ ಶ್ರೀ ಶಾಸ್ತಪ್ಪ ದೇವರ ವೆಳ್ಳಾಟಂ, ೫-೩೦ ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ರಾತ್ರಿ ೭ ಗಂಟೆಗೆ ಶ್ರೀ ವಿಷ್ಣುಮೂರ್ತಿ ಮೇಲೇರಿಗೆ ಅಗ್ನಿಸ್ಪರ್ಶ, ೮.೩೦ ಗಂಟೆಗೆ ಶ್ರೀ ಪೊವದಿ ವೆಳ್ಳಾಟಂ, ೯.೩೦ ಗಂಟೆಗೆ ಶ್ರೀ ವಿಷ್ಣುಮೂರ್ತಿ ವೆಳ್ಳಾಟಂ, ಮಧ್ಯರಾತ್ರಿ ೧೨ ಗಂಟೆಗೆ ಶ್ರೀ ಶಿವಭೂತ ತೆರೆ, ಮಧ್ಯರಾತ್ರಿ ೧ ಗಂಟೆಗೆ ಶ್ರೀ ಗುಳಿಗ ದೇವರ ತೆರೆ, ೨.೩೦ ಗಂಟೆಗೆ ಶ್ರೀ ಕುಟ್ಟಿಚಾತನ್ ದೇವರ ತೆರೆ, ೩ ಗಂಟೆಗೆ ಕಳಗ ಪಾಟ್, ಸಂದ್ಯಾವೇಲೆ ನಡೆಯಲಿದೆ.

ತಾ. ೧೦ ರ ಬೆಳಿಗ್ಗೆ ೪ ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ತೆರೆ, ಬೆಳಿಗ್ಗೆ ೫ ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವರ ಮೇಲೇರಿ, ೮ ಗಂಟೆಗೆ ಶ್ರೀ ಪೊವ್ವದಿ ತೆರೆ, ೯.೩೦ ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವರ ಬಾರಣೆ, ಮಧ್ಯಾಹ್ನ ೧೧.೩೦ ಕ್ಕೆ ಧ್ವಜ ಅವರೋಹಣ.

ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮುಖಾಂತರ ಕೋವಿಡ್ ನಿಯಮವನ್ನು ಪಾಲಿಸಬೇಕಾಗಿ ವಿನಂತಿಸಲಾಗಿದೆ.