ಮಡಿಕೇರಿ, ಏ. ೬: ಕಳೆದ ಮೂರು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಮಹಾಮಳೆಯಿಂದ ಸಾವು-ನೋವು ಸಂಭವಿಸಿ ಸಂಕಷ್ಟ ಎದುರಿಸುವಂತಾಯಿತು. ಈ ಬಾರಿ ಸೂಕ್ಷö್ಮ ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಸಂಭವಿಸಬಹುದಾದ ಪ್ರಕೃತಿ ವಿಕೋಪ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ ಈ ಹಿನ್ನೆಲೆ ಮಳೆಗಾಲದ ಅವಧಿಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಪ್ರವಾಹವನ್ನು ಎದುರಿಸಲು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ನಿರ್ದೇಶನ ನೀಡಿದರು.
ಮುಂದಿನ ಮಳೆಗಾಲದ ಅವಧಿಯಲ್ಲಿ ಮಳೆಯಿಂದಾಗುವ ಹಾನಿಯ ಕುರಿತು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಬಗ್ಗೆ ನಗರದ ಜಿ.ಪಂ.ಸಭಾAಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ನಿರ್ದೇಶನ ನೀಡಿದರು.
ಮುಂದಿನ ಮಳೆಗಾಲದ ಅವಧಿಯಲ್ಲಿ ಮಳೆಯಿಂದಾಗುವ ಹಾನಿಯ ಕುರಿತು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಬಗ್ಗೆ ನಗರದ ಜಿ.ಪಂ.ಸಭಾAಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
(ಮೊದಲ ಪುಟದಿಂದ) ವ್ಯಾಪಕ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಮುಂಚಿತವಾಗಿ ಮಾಹಿತಿ ಪಡೆದು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಆ ದಿಸೆಯಲ್ಲಿ ಮಳೆ ಹಾಗೂ ಇತರ ಸಂಬAಧ ಪ್ರತೀ ದಿನದ ಮಾಹಿತಿಯನ್ನು ಸಂಗ್ರಹಿಸಿ ಜಿಲ್ಲಾಡಳಿತಕ್ಕೆ ಒದಗಿಸುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಅಗತ್ಯ ಕಾರ್ಯಯೋಜನೆ ರೂಪಿಸಬೇಕು. ಇಂತಿಷ್ಟು ಮಳೆಯಾಗುತ್ತದೆ ಎಂಬ ಬಗ್ಗೆ ಮಾಹಿತಿ ಒದಗಿಸಬೇಕು. ಕಳೆದ ಬಾರಿಯಂತೆ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಹೋಬಳಿವಾರು ನೋಡಲ್ ಅಧಿಕಾರಿಗಳು, ತಹಶೀಲ್ದಾರರು, ನಗರ, ಪಟ್ಟಣ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಇತರರು ತಮ್ಮ ಹಂತದಲ್ಲಿ ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಟಾಸ್ಕ್ಫೋರ್ಸ್ ರಚನೆ :
ಮಳೆಗಾಲದ ಅವಧಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೆಚ್ಚಿನ ಎಚ್ಚರ ವಹಿಸಬೇಕಿದೆ. ಪ್ರಾಕೃತಿಕ ವಿಕೋಪ ಹಾಗೂ ಪ್ರವಾಹ ಎದುರಿಸುವ ನಿಟ್ಟಿನಲ್ಲಿ ಟಾಸ್ಕ್ಫೋರ್ಸ್ ತಂಡ ರಚಿಸಲಾಗುವುದು. ಕಂದಾಯ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅಗ್ನಿಶಾಮಕ, ಪೊಲೀಸ್, ಸೆಸ್ಕ್, ಅರಣ್ಯ ಹಾಗೆಯೇ ಇಂಜಿನಿಯರಿAಗ್ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಬೇಕು. ವಿಪತ್ತು ಎದುರಿಸುವಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಸಂಬAಧ ಅಗ್ನಿಶಾಮಕ, ಪೊಲೀಸ್, ಅರಣ್ಯ, ಸೆಸ್ಕ್, ಗೃಹ ರಕ್ಷಕದಳ ಹೀಗೆ ಹಲವು ಇಲಾಖೆಗಳಿಗೆ ಬೇಕಿರುವ ಸಾಧನ ಸಲಕರಣೆ ಸಂಬAಧ ಹತ್ತು ದಿನದೊಳಗೆ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ವ್ಯಾಪಕ ಮಳೆಯಾದಲ್ಲಿ ಸೂಕ್ಷö್ಮ ಪ್ರದೇಶದಲ್ಲಿನ ಜನರಿಗೆ ಮಾಹಿತಿ ನೀಡುವುದು, ಪರಿಹಾರ ಕೇಂದ್ರ ತೆರೆಯುವುದು, ಪಡಿತರ ವಿತರಣೆ, ವೈದ್ಯಕೀಯ ಸೌಲಭ್ಯ ಹೀಗೆ ಹಲವು ಕ್ರಮಕೈಗೊಳ್ಳಬೇಕಿದೆ. ಮಳೆಗಾಲದ ಅವಧಿಯಲ್ಲಿ ವ್ಯಾಪಕ ಮಳೆ ಉಂಟಾದಲ್ಲಿ ಶಾಲೆ, ಅಂಗನವಾಡಿಗಳಿಗೆ ರಜೆ ನೀಡುವ ಸಂಬAಧ ಜಿಲ್ಲಾಡಳಿತ ಅಗತ್ಯ ಕ್ರಮವಹಿಸಲಿದೆ. ವಿದ್ಯಾರ್ಥಿಗಳ ಸುರಕ್ಷತೆ ಮುಖ್ಯವಾಗಿದೆ ಎಂದು ಚಾರುಲತ ಸೋಮಲ್ ಹೇಳಿದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಮಾತನಾಡಿ, ಕಳೆದ ಮೂರು ವರ್ಷಗಳಲ್ಲಿ ಪ್ರಾಕೃತಿಕ ವಿಕೋಪದಿಂದ ಸಾಕಷ್ಟು ಸಂಕಷ್ಟ ಉಂಟಾಗಿದೆ. ಆದ್ದರಿಂದ ಪ್ರಕೃತಿ ವಿಕೋಪ ಎದುರಿಸುವಲ್ಲಿ ಅಗತ್ಯ ಕ್ರಮವಹಿಸಬೇಕಿದೆ ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್, ಡಿವೈಎಸ್‌ಪಿ ದಿನೇಶ್ ಕುಮಾರ್, ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಚಂದನ್, ಆಹಾರ ಇಲಾಖೆ ಉಪ ನಿರ್ದೇಶಕ ಗೌರವಕುಮಾರ್ ಶೆಟ್ಟಿ, ತಹಶೀಲ್ದಾರ್ ಮಹೇಶ್, ಪ.ಪಂ. ಮುಖ್ಯಾಧಿಕಾರಿಗಳಾದ ಕೃಷ್ಣ ಪ್ರಸಾದ್, ಶ್ರೀಧರ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ವಾಸುದೇವ, ಇತರರು ಕಳೆದ ಬಾರಿ ಪ್ರಾಕೃತಿಕ ವಿಕೋಪ ಹಾಗೂ ಪ್ರವಾಹ ಎದುರಿಸುವಲ್ಲಿ ಕೈಗೊಳ್ಳಲಾಗಿದ್ದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ರೂಪೇಶ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರಾಜು ಹಾಗೂ ಇತರರು ಇದ್ದರು.