ಶನಿವಾರಸಂತೆ, ಏ. ೮: ಶನಿವಾರಸಂತೆ ಗ್ರಾಮ ಪಂಚಾಯಿತಿ ವತಿಯಿಂದ ಕೊರೊನಾ ವೈರಸ್ ಕುರಿತು ಪಟ್ಟಣದ ಮುಖ್ಯರಸ್ತೆ, ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ ಹಾಗೂ ಸಂತೆ ಮಾರುಕಟ್ಟೆ ರಸ್ತೆಯಲ್ಲಿ ಜಾಗೃತಿ ಅಭಿಯಾನ ಜಾಥಾ ನಡೆಸಿ, ರೋಗ ಲಕ್ಷಣಗಳು, ಒಬ್ಬರಿಂದ ಒಬ್ಬರಿಗೆ ಹರಡುವ ರೀತಿ, ಚಿಕಿತ್ಸೆ ಹಾಗೂ ಸಾರ್ವಜನಿಕರು ಅನುಸರಿಸಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಪ್ರಕಟಣಾ ಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಲಾಯಿತು.

ಜಾಥಾದಲ್ಲಿ ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜ ಶೇಖರ್, ಉಪಾಧ್ಯಕ್ಷ ಎಸ್.ಆರ್. ಮಧು, ಪಿಡಿಓ ಮೇದಪ್ಪ ಸೇರಿದಂತೆ ಗ್ರಾ.ಪಂ. ಸದಸ್ಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.