ನಾಪೋಕ್ಲು, ಏ. ೮: ನಾಪೋಕ್ಲು ಗ್ರಾಮ ಪಂಚಾಯಿತಿ ವತಿಯಿಂದ ಸರಬರಾಜಾಗುತ್ತಿರುವ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆಯಲ್ಲಿ ನೀರು ಪೋಲಾಗುತ್ತಿದೆ. ರಸ್ತೆಯಲ್ಲಿ ನೀರು ನಿಂತ ಪರಿಣಾಮ ವಿದ್ಯಾರ್ಥಿಗಳು, ಸಾರ್ವಜನಿಕರು ನಡೆದಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ಫಾರಂ- ಮಕ್ಕಿ ದೇವಳ ಸಂಪರ್ಕ ರಸ್ತೆಯಲ್ಲಿ ಉಂಟಾಗಿದೆ.
ಬಿಸಿಲ ಬೇಗೆಯಿಂದ ಅಲ್ಲಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗುತ್ತಿರುವ ನಡುವೆ ಇಲ್ಲಿ ಕುಡಿಯುವ ನೀರನ್ನು ಪೋಲು ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಬಗ್ಗೆ ಸ್ಥಳೀಯರು ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರಿಗೆ ತಿಳಿಸಿದರೂ ಕೂಡ ಯಾವದೇ ಪ್ರಯೋಜನವಾಗಿಲ್ಲ.
ಕಳೆದ ೧೫ ದಿನಗಳಿಂದ ಕುಡಿಯುವ ನೀರಿನ ಮುಖ್ಯ ಪೈಪ್ ಒಡೆದು ಹೋಗಿರುವ ಕಾರಣ ರಸ್ತೆಯಲ್ಲಿ ನೀರು ಪೋಲಾಗುತ್ತಿದ್ದು, ಈ ಬಗ್ಗೆ ನಾಪೋಕ್ಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಎರಡು ಸಲ ದೂರವಾಣಿ ಮೂಲಕ ಮಾಹಿತಿ ನೀಡಿದ್ದೇನೆ. ಕಾರ್ಮಿಕರು ಇಲ್ಲ ಎಂಬ ಉತ್ತರವನ್ನು ಅಭಿವೃದ್ಧಿ ಅಧಿಕಾರಿ ನೀಡಿ ಮೌನವಾಗಿದ್ದಾರೆ. ಸಂಬAಧಿಸಿದವರು ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ನಾಪೋಕ್ಲು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಟಿ.ಎ.ಮಹಮ್ಮದ್ ಹನೀಫ್ ಒತ್ತಾಯಿಸಿದ್ದಾರೆ.