ಮಡಿಕೇರಿ, ಏ. ೮: ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧೆಡೆ ದುಡಿಯುತ್ತಿರುವ ಬಾಲ ಕಾರ್ಮಿಕರ ಬಗ್ಗೆ ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಅಂತೋಣಿ ಸೆಬಾಸ್ಟಿಯನ್ ಸೂಚಿಸಿದ್ದಾರೆ.

ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಬಾಲನ್ಯಾಯ, ಪೋಕ್ಸೋ ಹಾಗೂ ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ ಅನುಷ್ಠಾನ ಸಂಬAಧ ಮಾಹಿತಿ ಪಡೆದು ಅವರು ಮಾತನಾಡಿದರು.

ಜಿಲ್ಲೆಯ ಲೈನ್‌ಮನೆಗಳಲ್ಲಿ ಎಷ್ಟು ಕುಟುಂಬಗಳು ವಾಸಿಸುತ್ತಿದ್ದಾರೆ. ಲೈನ್ ಮನೆಗಳ ಕುಟುಂಬಗಳ ಮಕ್ಕಳು ಶಾಲೆಗೆ ದಾಖಲಾಗಿದ್ದಾರೆಯೇ, ವಸತಿ ಶಾಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಹಾಗೂ ಹೊರ ಜಿಲ್ಲೆ, ಹೊರ ರಾಜ್ಯದ ಬಾಲ ಕಾರ್ಮಿಕರು ಪೋಷಕರ ಜೊತೆ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಇದ್ದು, ಈ ಸಂಬAಧ ವಿವಿಧ ಇಲಾಖೆಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ಒಂದು ತಿಂಗಳಲ್ಲಿ ಮಾಹಿತಿ ಒದಗಿಸುವಂತೆ ನಿರ್ದೇಶನ ನೀಡಿದರು.

ಈ ಬಗ್ಗೆ ವರದಿ ಸಲ್ಲಿಸುವಂತೆ ಡಾ.ಅಂತೋಣಿ ಸೆಬಾಸ್ಟಿಯನ್ ಸೂಚಿಸಿದರು.

ಬಾಲ್ಯ ವಿವಾಹ ತಡೆಯುವಲ್ಲಿ ಯಾವ ಕ್ರಮ ಕೈಗೊಳ್ಳಲಾಗಿದೆ. ಬಾಲ್ಯ ವಿವಾಹ ಕಂಡುಬAದ ಪ್ರಕರಣಗಳನ್ನು ಇದುವರೆಗೆ ಎಷ್ಟು ಪ್ರಕರಣಗಳಿಗೆ ಎಫ್‌ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ, ಹೆಚ್ಚಿನ ಜಾಗೃತಿ ಮೂಡಿಸುವಂತೆ ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಸಹಕಾರ ಪಡೆದು ಮಕ್ಕಳ ಮೇಲಿನ ದೌರ್ಜನ್ಯ ತಡೆಯಬೇಕು. ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೋಕ್ಸೋ ಪ್ರಕರಣದಿಂದ ಆಗುತ್ತಿರುವ ಶಿಕ್ಷೆಯ ಬಗ್ಗೆ ಮಾಹಿತಿ ನೀಡಬೇಕು. ವಿವಿಧ ಇಲಾಖೆಗಳು ಸಮನ್ವಯತೆ ಯಿಂದ ಕಾರ್ಯನಿರ್ವಹಿಸಿದ್ದಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಆದಿವಾಸಿಗಳ ಬದುಕು, ಬವಣೆ, ಅವರ ಜೀವನ ಶೈಲಿ, ಜೀವನ ಮಟ್ಟ ಸುಧಾರಣೆ ಮಾಡುವುದು. ಹೀಗೆ ಎಷ್ಟು ಹಾಡಿಗಳಲ್ಲಿ ಆದಿವಾಸಿಗಳು ವಾಸಿಸುತ್ತಿದ್ದಾರೆ. ಅವರ ಬದುಕು ಸುಧಾರಣೆಗೆ ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗೆ ಸೂಚಿಸಿದರು.

ಸಮಿತಿ ಸದಸ್ಯರಾದ ಶಂಕರಪ್ಪ, ಪರಶುರಾಮ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸಭೆಯನ್ನು ಮೂರು ತಿಂಗಳಿಗೊಮ್ಮೆ ನಡೆಸಬೇಕು. ಬಾಲಕರ ಮತ್ತು ಬಾಲಕಿಯರ ಮಂದಿರದಲ್ಲಿ ಸಮರ್ಪಕ ನಿರ್ವಹಣೆ ಮಾಡಬೇಕು. ಉತ್ತಮ ಗುಣಮಟ್ಟದ ಆಹಾರ ಪೂರೈಸುವಂತೆ ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ, ಜಿಲ್ಲೆಯಲ್ಲಿ ಒಟ್ಟು ೧೫ ಮಕ್ಕಳ ಪಾಲನಾ ಸಂಸ್ಥೆಗಳಿವೆ ಎಂದು ಮಾಹಿತಿ ನೀಡಿದರು.

ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್, ಅರಣ್ಯ ಹಕ್ಕು ಕಾಯ್ದೆಯಡಿ ಆದಿವಾಸಿಗಳಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಹಾಗೆಯೇ ಜಿಲ್ಲೆಯಲ್ಲಿ ೧೬೭ ಕ್ಕೂ ಹೆಚ್ಚು ಹಾಡಿಗಳಿದ್ದು, ಸುಮಾರು ೪,೭೦೦ ಕುಟುಂಬಗಳು ಲೈನ್‌ಮನೆಗಳಲ್ಲಿ ವಾಸ ಮಾಡುತ್ತಿದ್ದಾರೆ. ಸುಮಾರು ೮,೯೧೦ ಮನೆಗಳನ್ನು ನಿರ್ಮಿಸಿಕೊಡಬೇಕಿದೆ ಎಂದು ವಿವರಿಸಿದರು.

ಸಮಿತಿ ಸದಸ್ಯ ರಾಘವೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೋ ಅವರು ಶಿಕ್ಷಣ ಹಕ್ಕು ಕಾಯ್ದೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಿಂಗರಾಜು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಕಾರ್ಮಿಕ ಅಧಿಕಾರಿ ಯತ್ನಟ್ಟಿ, ವಿಶೇಷ ಮಕ್ಕಳ ಪೊಲೀಸ್ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮತಿ, ಚೈಲ್ಡ್ಲೈನ್ ಸಹಾಯವಾಣಿಯ ನವೀನ್, ಪ್ರತಿನಿಧಿಗಳಾದ ರಾಯ್ ಡೇವಿಡ್ ಇತರರು ಮಕ್ಕಳ ಹಕ್ಕುಗಳ ರಕ್ಷಣೆ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು. ಮಕ್ಕಳ ಕಲ್ಯಾಣ ಸಮಿತಿ ಸಮಿತಿ ಸದಸ್ಯೆ ಉಷಾ ಅಯ್ಯಣ್ಣ ನಾನಾ ಇಲಾಖೆ ಅಧಿಕಾರಿಗಳು ಇದ್ದರು.