ಕೂಡಿಗೆ, ಏ. ೮: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಶಿಕ್ಷಣ ಇಲಾಖೆ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಕೂಡಿಗೆ ಡಯಟ್ ಸಂಸ್ಥೆ ಆಶ್ರಯದಲ್ಲಿ ಕೂಡಿಗೆಯ ಕಾಬ್ಸೆಟಿ ಕೇಂದ್ರದಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿದ್ದ ರಾಜ್ಯಮಟ್ಟದ ಜನ ವಿಜ್ಞಾನ ಚಳವಳಿ ಕಾರ್ಯಾಗಾರದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಹಾಗೂ ವಿಜ್ಞಾನ ಕಾರ್ಯಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ ಇಬ್ಬರು ಉಪನಿರ್ದೇಶಕರನ್ನು ಗೌರವಿಸಲಾಯಿತು. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ಕಾರ್ಯಾಗಾರದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಹಾಗೂ ವಿಜ್ಞಾನ ಕಾರ್ಯಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ ಇಬ್ಬರು ಉಪನಿರ್ದೇಶಕರನ್ನು ಗೌರವಿಸಲಾಯಿತು. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಪಿ.ಎಸ್. ಮಚ್ಚಾಡೋ ಹಾಗೂ ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯ ಪ್ರಾಂಶು ಪಾಲರೂ ಆದ ಇಲಾಖೆಯ ಉಪ ನಿರ್ದೇಶಕ (ಅಭಿವೃದ್ಧಿ) ಎ. ಶ್ರೀಧರನ್ ಅವರನ್ನು ವಿಜ್ಞಾನ ಪರಿಷತ್ತು ಪರವಾಗಿ ವಿಜ್ಞಾನ ಪರಿಷತ್ತಿನ ಕೇಂದ್ರ ಸಮಿತಿಯ ಗೌರವ ಕಾರ್ಯದರ್ಶಿ ಸಿ. ಕೃಷ್ಣೇಗೌಡ ಅಭಿನಂದಿಸಿದರು. ಪರಿಷತ್ತಿನ ಗೌರವ ಕೋಶಾಧಿಕಾರಿ ಈ. ಬಸವರಾಜ್ ವಿಜ್ಞಾನ ಪುಸ್ತಕವನ್ನು ನೀಡಿ ಗೌರವಿಸಿದರು.