ಸೋಮವಾರಪೇಟೆ, ಏ. ೮: ಸರ್ಕಾರ ನಿಗದಿಪಡಿಸಿರುವ ನಿಬಂಧನೆಗಳನ್ನು ಮೀರಿ ಬಿಪಿಎಲ್ ಕಾರ್ಡ್ಗಳನ್ನು ಹೊಂ

ದಿರುವವರು ತಕ್ಷಣ ತಮ್ಮ ಕಾರ್ಡ್ಗಳನ್ನು ಇಲಾಖೆಗೆ ಹಿಂದಿರುಗಿಸಬೇಕು. ತಪ್ಪಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ತಾಲೂಕು ತಹಶೀಲ್ದಾರ್ ಎಚ್ಚರಿಸಿದ್ದಾರೆ.

ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು (ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ) ಒಳಗೊಂಡAತೆ ಆದಾಯ ತೆರಿಗೆ,ಸೇವಾ ತೆರಿಗೆ,ವ್ಯಾಟ್,ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿದ್ದರೆ ತಕ್ಷಣ ಹಿಂತಿರುಗಿಸಬೇಕು ಎಂದು ತಹಶೀಲ್ದಾರ್ ಗೋವಿಂದರಾಜು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದರೊಂದಿಗೆ ಗ್ರಾಮೀಣ ಪ್ರದೇಶದಲ್ಲಿ ೩ ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತು ಪಡಿಸಿ ನಗರ ಪ್ರದೇಶಗಳಲ್ಲಿ ೧೦೦೦ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾö್ಯಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು, ಕುಟುಂಬದ ವಾರ್ಷಿಕ ಆದಾಯವು ರೂ. ೧.೨೦ ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಅಂತ್ಯೋದಯ ಅನ್ನ ತಹಶೀಲ್ದಾರ್ ಗೋವಿಂದರಾಜು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದರೊಂದಿಗೆ ಗ್ರಾಮೀಣ ಪ್ರದೇಶದಲ್ಲಿ ೩ ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತು ಪಡಿಸಿ ನಗರ ಪ್ರದೇಶಗಳಲ್ಲಿ ೧೦೦೦ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾö್ಯಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು, ಕುಟುಂಬದ ವಾರ್ಷಿಕ ಆದಾಯವು ರೂ. ೧.೨೦ ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಅಂತ್ಯೋದಯ ಅನ್ನ ಹಿಂತಿರುಗಿಸಿ ಆದ್ಯತೇತರ ಪಡಿತರ ಚೀಟಿ ಪಡೆದಿರುತ್ತಾರೆ. ಆದರೂ ಹಲವಷ್ಟು ಮಂದಿ ಅಕ್ರಮವಾಗಿ ಬಿಪಿಎಲ್ ಚೀಟಿ ಹೊಂದಿದ್ದಾರೆ ಎಂದು ತಹಶೀಲ್ದಾರ್ ಗೋವಿಂದರಾಜು ತಿಳಿಸಿದ್ದಾರೆ.

ಸರ್ಕಾರ ನಿಗದಿ ಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೇ ತಾಲೂಕಿನ ತಹಶೀಲ್ದಾರರಿಗೆ ಒಪ್ಪಿಸಿ ಆದ್ಯತೇತರ (ಎ.ಪಿ.ಎಲ್) ಪಡಿತರ ಚೀಟಿ ಪಡೆಯಬೇಕು. ತಪ್ಪಿದಲ್ಲಿ ಅಗತ್ಯ ವಸ್ತುಗಳ ಕಾಯ್ದೆ ೧೯೫೫ ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ ೧೯೭೭ ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸಲಾಗುವುದು. ಇದರೊಂದಿಗೆ ಹಂಚಿಕೆ ಪಡೆದ ಆಹಾರ ಧಾನ್ಯಗಳ ಮಾರುಕಟ್ಟೆ ಮೌಲ್ಯವನ್ನು ವಸೂಲು ಮಾಡಲಾಗುವುದೆಂದು ತಹಶೀಲ್ದಾರ್ ಎಚ್ಚರಿಸಿದ್ದಾರೆ.