ಪಾಲಿಬೆಟ್ಟ, ಏ. ೭: ಎಲ್ಲಾ ರೀತಿಯಲ್ಲೂ ಹಿಂದುಳಿದಿರುವ ಆದಿವಾಸಿಗಳು ಶಿಕ್ಷಣದೊಂದಿಗೆ ಅಭಿವೃದ್ಧಿ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಆದಿವಾಸಿ ಮುಖಂಡ ಜೆ. ಕೆ ಅಪ್ಪಾಜಿ ಮನವಿ ಮಾಡಿದ್ದಾರೆ.

ತಿತಿಮತಿ ಶಾಲಾ ಮೈದಾನದಲ್ಲಿ ತಾ. ೧೧ ರವರೆಗೆ ನಡೆಯುವ ಅಮ್ಮಾಳೆ ಕ್ರಿಕೆಟ್ ಹಾಗೂ ಇತರ ಕ್ರೀಡಾಕೂಟ ಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು

ಆಚಾರ, ವಿಚಾರ, ಸಂಸ್ಕೃತಿ, ಪರಂಪರೆಯೊAದಿಗೆ ಬದುಕು ಸಾಗಿಸುತ್ತಿರುವ ಆದಿವಾಸಿಗಳ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮೂಲಕ ಮುಖ್ಯವಾಹಿನಿಗೆ ತಂದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ.

ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ. ಸಂಘಟನೆಯೊAದಿಗೆ ಸಕ್ರಿಯವಾಗಿ ಸಮಾಜ ಸೇವೆಯೊಂದಿಗೆ ಮುನ್ನಡೆ ಯುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಕ್ರೀಡೆ ಅತ್ಯಗತ್ಯವಾಗಿದೆ ಎಂದರು. ಗಿರಿಜನರ ಸಹಕಾರ ಸಂಘದ ಅಧ್ಯಕ್ಷ ಮಣಿ ಮಾತನಾಡಿ ಆದಿವಾಸಿಗಳಿಗಾಗಿ ಆಯೋಜಿಸಿರುವ ಕ್ರೀಡಾಕೂಟ .ಮುಂದಿನ ದಿನಗಳಲ್ಲಿ ಆದಿವಾಸಿಗಳ ಯುವಸಮೂಹದ ಭವಿಷ್ಯ ರೂಪಿಸಲು ಸಹಕಾರಿಯಾಗಲಿದೆ.

ಕ್ರೀಡಾ ಸ್ಫೂರ್ತಿಯೊಂದಿಗೆ ಸಾಧನೆ ಮಾಡುವ ಮೂಲಕ ಸಮಾಜದಲ್ಲಿ ಗುರುತಿಸಿಕೊಳ್ಳುವಂತೆ ಹೇಳಿದ ಅವರು, ಆದಿವಾಸಿಗಳಿಗೆ ವೇದಿಕೆ ಕಲ್ಪಿಸಿರುವ ಜೇನುಕುರುಬರ ಯುವಕ ಸಂಘದ ಕಾರ್ಯವನ್ನು ಶ್ಲಾಘಿಸಿದರು.

ಈ ಸಂದರ್ಭ ಗ್ರಾಮ ಪಂಚಾಯ್ತಿ ಸದಸ್ಯ ಅಪ್ರೋಸ್, ಶಾಲಾ ಮುಖ್ಯ ಶಿಕ್ಷಕಿ ಪಾರ್ವತಿ, ಶಿಕ್ಷಕಿ ರಾಣಿ, ಜೇನು ಕುರುಬರ ಸಂಘದ ಅಧ್ಯಕ್ಷ ರಘು, ಉಪಾಧ್ಯಕ್ಷ ಮನು, ಕಾರ್ಯದರ್ಶಿ ಜೆ.ಕೆ. ಅಯ್ಯಪ್ಪ, ಮತ್ತಿತರರು ಉಪಸ್ಥಿತರಿದ್ದರು.

ಕ್ರಿಕೆಟ್ ಪಂದ್ಯಾವಳಿಯಲ್ಲಿ ೬೦ ತಂಡಗಳು ನೋಂದಾಯಿಸಿಕೊAಡಿದ್ದು, ತಾ. ೧೧ ರಂದು ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ.

-ವರದಿ ಪುತ್ತಂ ಪ್ರದೀಪ್