ಸಿದ್ದಾಪುರ, ಏ. ೮: ನೆಲ್ಲಿಹುದಿಕೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಳೆದ ಸುಮಾರು ೨೦ ವರ್ಷಗಳಿಂದ ಅಡುಗೆ ಕೆಲಸ ಮಾಡಿಕೊಂಡಿದ್ದ ಸಾವಿತ್ರಿ ಅವರು ನಿವೃತ್ತಿಯಾಗಿದ್ದು, ಇವರನ್ನು ಶಾಲಾಭಿವೃದ್ಧಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಈ ಸಂದರ್ಭ ಶಾಲಾಭಿವೃದ್ಧಿ ಅಧ್ಯಕ್ಷ ಪಿ.ಸಿ. ಅಚ್ಚಯ್ಯ, ಜಿ.ಪಂ. ಸದಸ್ಯೆ ಸುನಿತಾ ಮಂಜುನಾಥ್, ಗ್ರಾ.ಪಂ. ಸದಸ್ಯ ಅಪ್ಸಲ್ ಹಾಗೂ ಆಡಳಿತ ಮಂಡಳಿ, ಸದಸ್ಯರು ಮತ್ತು ಶಾಲಾ ಶಿಕ್ಷಕರು ಹಾಜರಿದ್ದರು. ಸಿದ್ದಾಪುರ, ಏ. ೮: ಕರಡಿಗೋಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಸುಮಾರು ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮೋಳಿ ಅವರನ್ನೂ ಬೀಳ್ಕೊಡಲಾಯಿತು. ಶಾಲಾಭಿವೃದ್ಧಿ ಸಮಿತಿ ಹಾಗೂ ಗ್ರಾಮಸ್ಥರು ಶಿಕ್ಷಕಿ ಮೋಳಿ ಅವರನ್ನೂ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಕಾಫಿ ಬೆಳೆಗಾರರಾದ ಕೆ.ಪಿ. ಗಣಪತಿ, ಕೆ.ಆರ್. ಸೂರಜ್, ತಮ್ಮಯ್ಯ ಹಾಗೂ ಶಿಕ್ಷಣ ಇಲಾಖಾಧಿಕಾರಿಗಳಾದ ಅಜಿತ, ಕರುಂಬಯ್ಯ ಶಿಕ್ಷಕರು ಹಾಗೂ ಇತರರು ಹಾಜರಿದ್ದರು.