ಚೆಂಬು, ಏ. ೮: ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ, ಇವರಿಂದ ಚೆಂಬು ಗ್ರಾಮ ಪಂಚಾಯಿತಿ ಮತ್ತು ಶ್ರೀ ಭಗವಾನ್ ಸಂಘ ಊರುಬೈಲು ಇವರ ಸಹಯೋಗದಲ್ಲಿ ಚೆಂಬು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮದ ೪೫ ವರ್ಷ ಮೇಲ್ಪಟ್ಟ ಜನರಿಗೆ ಉಚಿತ ಕೋವಿಡ್ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಪಂಚಾಯಿತಿ ಅಧ್ಯಕ್ಷೆ ಕುಸುಮ ಯೋಗೇಶ್ವರ್ ಚಾಲನೆ ನೀಡಿದರು. ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಚೆಂಬು, ಏ. ೮: ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ, ಇವರಿಂದ ಚೆಂಬು ಗ್ರಾಮ ಪಂಚಾಯಿತಿ ಮತ್ತು ಶ್ರೀ ಭಗವಾನ್ ಸಂಘ ಊರುಬೈಲು ಇವರ ಸಹಯೋಗದಲ್ಲಿ ಚೆಂಬು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮದ ೪೫ ವರ್ಷ ಮೇಲ್ಪಟ್ಟ ಜನರಿಗೆ ಉಚಿತ ಕೋವಿಡ್ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಪಂಚಾಯಿತಿ ಅಧ್ಯಕ್ಷೆ ಕುಸುಮ ಯೋಗೇಶ್ವರ್ ಚಾಲನೆ ನೀಡಿದರು. ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅನಂತ್ ಊರುಬೈಲು, ಆಸ್ಪತ್ರೆಯ ಆಡಳಿತಾಧಿಕಾರಿ ಮಲ್ಲಿಕಾರ್ಜುನ್ ಅವರು ಕೋವಿಡ್ ಲಸಿಕೆಯ ಮಹತ್ವ ಮತ್ತು ಕೋವಿಡ್ ಅನ್ನು ತಡೆಗಟ್ಟಲು ಅನುಸರಿಸಬೇಕಾದ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಶ್ರೀ ಭಗವಾನ್ ಸಂಘದ ಅಧ್ಯಕ್ಷ ರವಿರಾಜ್ ಹೊಸೂರು, ಗ್ರಾ.ಪಂ. ಸದಸ್ಯ ಆದಂ ಸೆಂಟ್ಯಾರ್, ಕಂದಾಯ ಅಧಿಕಾರಿ ರೇಷ್ಮಾ ಅವರು ಉಪಸ್ಥಿತರಿದ್ದರು. ಗ್ರಾಮದ ಸುಮಾರು ೧೦೭ ಮಂದಿ ಲಸಿಕೆಯ ಸೌಲಭ್ಯ ಪಡೆದುಕೊಂಡರು.