ಮಡಿಕೇರಿ, ಏ. ೮: ಮಡಿಕೇರಿ ನಗರಸಭಾ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಆಮ್ ಆದ್ಮಿ ಪಾರ್ಟಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಸಲು ನಿರ್ಧರಿಸಲಾಗಿದೆ.

ಮಡಿಕೇರಿ ಜನತೆ ಅನೇಕ ವರ್ಷಗಳಿಂದ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿ ಇಲ್ಲಿನ ಸ್ಥಳೀಯ ಆಡಳಿತದಿಂದ ಬೇಸತ್ತಿರುವುದು ಸ್ಪಷ್ಟವಾಗಿದೆ. ಇಲ್ಲಿನ ಮತದಾರರು ಪರ್ಯಾಯವಾದ ರಾಜಕೀಯ ಶಕ್ತಿಯೊಂದನ್ನು ಬಯಸುತ್ತಿದ್ದಾರೆ. ದೆಹಲಿ ಮಾದರಿಯ ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಆಡಳಿತವನ್ನು ಬಯಸುತ್ತಿದ್ದಾರೆ. ಈ ದಿಸೆಯಲ್ಲಿ ಆಮ್ ಆದ್ಮಿ ಪಕ್ಷವು ಮಡಿಕೇರಿಯ ಎಲ್ಲಾ ವಾರ್ಡ್ಗಳಲ್ಲಿ ಸ್ಪರ್ಧಿಸಿ ಇಲ್ಲಿನ ಜನತೆಯ ಆಶೋತ್ತರಗಳನ್ನು ಈಡೇರಿಸುವ ದಿಸೆಯಲ್ಲಿ ಮಡಿಕೇರಿ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಯತ್ನ ಮಾಡುತ್ತದೆ ಎಂದು ಆಪ್ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಬಿ.ಟಿ. ನಾಗಣ್ಣ, ಕೋಳಿಬೈಲು ಚಿನ್ನಪ್ಪ ವೆಂಕಟೇಶ್, ಉದಯ್‌ಕುಮಾರ್, ನಾರಾಯಣಸ್ವಾಮಿ, ಅಕ್ರಂ ಸೇಠ್ ಉಪಸ್ಥಿತರಿದ್ದರು.