ನಾಪೋಕ್ಲು, ಏ. ೮: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಪೋಕ್ಲು ಗ್ರಾಮಪಂಚಾಯಿತಿ ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಂತೆಯ ದಿನವಾದ ಸೋಮವಾರ ಪಟ್ಟಣದಲ್ಲಿ ಮಾಸ್ಕ್ ಧರಿಸದೆ ಸಂಚರಿಸಿದವರಿಗೆ ದಂಡ ವಿಧಿಸಿದರು.
ಕೊರೊನಾ ಮುಂಜಾಗ್ರತಾ ಕ್ರಮವಾಗಿ ೪೫ ವರ್ಷ ಮೇಲ್ಪಟ್ಟ ವಯಸ್ಕರು ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳುವಂತೆ ಮಾಹಿತಿ ನೀಡಲಾಯಿತು. ಅಂಗಡಿಗಳಲ್ಲಿ ಜನದಟ್ಟಣೆ ಇರುವಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಲಾಗಿದ್ದು ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಹಾಗೂ ಪಿಡಿಒ ಚೋಂದಕ್ಕಿ ತಿಳಿಸಿದರು.