ಶನಿವಾರಸಂತೆ, ಏ. ೭: ಪಟ್ಟಣದಿಂದ ೩ ಕಿ.ಮೀ. ದೂರದ ಚಿಕ್ಕಕೊಳತ್ತೂರು ಗ್ರಾಮದಲ್ಲಿ ೪೦೦ ವರ್ಷಗಳ ಇತಿಹಾಸವಿರುವ ಬಾವಿ ಬಸವೇಶ್ವರ ದೇವಾಲಯದಲ್ಲಿ ದೇವರ ಆರಾಧನಾ ಮಹೋತ್ಸವ ಸೋಮವಾರ ಶ್ರದ್ಧಾಭಕ್ತಿಯಿಂದ ನೆರವೇರಿತು. ಸುತ್ತಲಿನ ವಿವಿಧ ಗ್ರಾಮಗಳಿಂದ ಬಂದಿದ್ದ ಸಾವಿರಾರು ಭಕ್ತರು ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು.