ಮಡಿಕೇರಿ, ಏ. ೯: ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದ್ದ ಆದೇಶವನ್ನು ಕೊಡಗು ಜಿಲ್ಲಾಡಳಿತ ಹಿಂಪಡೆದುಕೊAಡಿದೆ. ಜಿಲ್ಲಾಡಳಿತ ಹೊರಡಿಸಿರುವ ಆದೇಶ ಹಿಂಪಡೆದು, ಸಕ್ಷಮ ಪ್ರಾಧಿಕಾರ ಸೂಚಿಸುವ ಮಾರ್ಗಸೂಚಿ, ಆದೇಶವನ್ನು ಮಾತ್ರ ಪಾಲಿಸಬೇಕೆಂದು ಸರಕಾರ ಸುತ್ತೋಲೆ ಹೊರಡಿಸಿದ ಹಿನ್ನೆಲೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹಿಂಪಡೆದಿದ್ದಾರೆ.

ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಭೇಟಿ ನಿಷೇಧ ಸೇರಿದಂತೆ ಚಿತ್ರಮಂದಿರದಲ್ಲಿ ಒಟ್ಟು ಸಾಮರ್ಥ್ಯದ ಶೇ. ೫೦ ರಷ್ಟು ವೀಕ್ಷಕರಿಗೆ ಮಾತ್ರ ಅವಕಾಶ ಹಾಗೂ ಪಬ್, ಬಾರ್, ಕ್ಲಬ್ ರೆಸ್ಟೋರೆಂಟ್‌ಗಳಲ್ಲಿ ಗರಿಷ್ಠ ಗ್ರಾಹಕರ ಸಂಖ್ಯೆಯ ಶೇ. ೫೦ ರಷ್ಟು ಮೀರದಂತೆ ಕಾರ್ಯಾಚರಿಸಲು ಈ ಹಿಂದೆ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.

ಇಂದಿನಿAದ ಪ್ರವಾಸಿ ತಾಣಕ್ಕೆ ಪ್ರವೇಶ

ತಾ. ೩ರಂದು ಪ್ರವಾಸಿ ತಾಣ ಪ್ರವೇಶವನ್ನು ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿರುವ ಹಿನ್ನೆಲೆ ಇಂದಿನಿAದ ಜಿಲ್ಲೆಯ ಪ್ರವಾಸಿ ತಾಣಗಳು ಮತ್ತೆ ತೆರೆಯಲ್ಪಡುತ್ತಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ‘ಶಕ್ತಿ’ಗೆ ಪ್ರತಿಕ್ರಿಯಿಸಿದ್ದಾರೆ. ಸರಕಾರದ ಆದೇಶದ ಅನುಸಾರ ನಿರ್ಧಾರ ಕೈಗೊಂಡಿದ್ದು ಪ್ರವಾಸಿ ತಾಣಗಳು ಸೂಕ್ತ ಮುಂಜಾಗ್ರತೆ ವಹಿಸಲಾಗುವುದು. ಪ್ರವಾಸಿಗರು ಜಿಲ್ಲಾಡಳಿತದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.