ಮಡಿಕೇರಿ, ಏ. ೯: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೋವಿಡ್-೧೯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಸ್ಕ್ ಧರಿಸುವುದು, ಅಂತರ ಕಾಯ್ದು ಕೊಳ್ಳುವುದು, ಸ್ಯಾನಿಟೈಸರ್ ಬಳಸುವುದು ಮತ್ತಿತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-೧೯ ನಿಯಂತ್ರಣ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್-೧೯ ನಿಯಂತ್ರಣ ಸಂಬAಧ ಕೋವಿಡ್ ಪರೀಕ್ಷೆ, ಲಸಿಕೆ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ತಂಡವಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೋವಿಡ್-೧೯ ಪ್ರಕರಣಗಳು ಹೆಚ್ಚಾಗದಂತೆ ಮತ್ತಷ್ಟು ಎಚ್ಚರವಹಿಸಬೇಕು. ಕೋವಿಡ್-೧೯ ಸಂಬAಧ ಮುಂಚೂಣಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಹಂತದ ಅಧಿಕಾರಿಗಳು ಕೋವಿಡ್-೧೯ ಲಸಿಕೆಯನ್ನು ಪಡೆಯಬೇಕು. ಲಸಿಕೆ ಪಡೆಯುವುದರಿಂದ ಮತ್ತೊಬ್ಬರಿಗೆ ಸಲಹೆ ಮಾಡಲು ಸಾಧ್ಯ. ಆದ್ದರಿಂದ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಗಳು ಕೋವಿಡ್ ಲಸಿಕೆ ಪಡೆಯುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲಹೆ ನೀಡಿದರು.

ಜೂನ್ ನಂತರ ಮಳೆಗಾಲ ಆರಂಭವಾಗುವುದರಿAದ ಕಳೆದ ವರ್ಷದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು. ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಉಂಟಾಗದAತೆ ಗಮನ ಹರಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಚಾರುಲತ ಸೋಮಲ್ ಮಾತನಾಡಿ, ಕೋವಿಡ್-೧೯ ನಿಯಂತ್ರಣ ಸಂಬAಧ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಕೋವಿಡ್ ಲಸಿಕೆ ಹಾಕುವಲ್ಲಿ ರಾಜ್ಯದಲ್ಲಿ ಕೊಡಗು ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಕೋವಿಡ್ ಪರೀಕ್ಷೆ ಹಾಗೂ ಕೋವಿಡ್ ನಿಯಂತ್ರಣದಲ್ಲಿ ಜಿಲ್ಲಾಡಳಿತ ಶ್ರಮಿಸುತ್ತಿದೆ. ಕೋವಿಡ್ ನಿಯಂತ್ರಣ ಸಂಬAಧ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಂದಾಯ ಹಾಗೂ ಪಿಂಚಣಿ ಅದಾಲತ್, ಸಾಮಾಜಿಕ ಭದ್ರತೆ ಯೋಜನೆಗಳು ಮತ್ತಿತರ ಬಗ್ಗೆ ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.

ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ತಹಶೀಲ್ದಾರ್ ಮಹೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ, ಕೃಷಿ ಇಲಾಖೆ ಉಪ ನಿರ್ದೇಶಕರಾದ ರಾಜು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಡಾ.ಲೋಕೇಶ್, ಡಾ.ಆನಂದ್, ಡಾ.ಮಹೇಶ್, ಜಿ.ಪಂ. ಉಪಕಾರ್ಯದರ್ಶಿ ಲಕ್ಷಿö್ಮÃ, ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್, ಶ್ರೀಕಂಠಮೂರ್ತಿ, ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್, ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಸುರೇಶ್ ಭಟ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ಬಿಸಿಎಂ ಇಲಾಖೆ ಅಧಿಕಾರಿ ಲಿಂಗರಾಜು, ಸೆಸ್ಕ್ ಇಇ ಅಶೋಕ್ ಇತರರು ಇದ್ದರು.