ಮಡಿಕೇರಿ, ಏ. ೯: ಜಿಲ್ಲೆಯಲ್ಲಿ ತಾ.೯ ರಂದು ೧೯ ಹೊಸ ಕೋವಿಡ್-೧೯ ಪ್ರಕರಣ ದೃಢಪಟ್ಟಿದೆ. ೧೭ ಪ್ರಕರಣಗಳು ಆರ್ಟಿಪಿಸಿಆರ್ ಮತ್ತು ೨ ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೧೦, ಸೋಮವಾರಪೇಟೆ ತಾಲೂಕಿನಲ್ಲಿ ೭, ವೀರಾಜಪೇಟೆ ತಾಲೂಕಿನಲ್ಲಿ ೨ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೬೫೨೭ ಆಗಿದ್ದು, ೬೩೧೩ ಮಂದಿ ಗುಣಮುಖರಾಗಿದ್ದಾರೆ. ೧೩೧ ಸಕ್ರಿಯ ಪ್ರಕರಣಗಳಿದ್ದು, ೮೩ ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ಮೆAಟ್ ವಲಯಗಳ ಸಂಖ್ಯೆ ೯೮ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದ್ದಾರೆ.