ಮಡಿಕೇರಿ, ಏ. ೯: ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ ೩ ತಾಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರಿಂz À(ಎಂಆರ್ಡಬ್ಲೂö್ಯ) ಗಳು ಈಗಾಗಲೇ ವಿಕಲಚೇತನರ ಮಾಹಿತಿಯನ್ನು ತಂತ್ರಾAಶದಲ್ಲಿ ನಮೂದಿಸುವ ಕಾರ್ಯ ಪ್ರಾರಂಭವಾಗಿದೆ.
ಫಲಾನುಭವಿಗಳು ತುರ್ತಾಗಿ ಅವಶ್ಯಕ ದಾಖಲಾತಿಗಳೊಂದಿಗೆ ಬಂದು ತಂತ್ರಾAಶದಲ್ಲಿ ತಮ್ಮ ಮಾಹಿತಿಯನ್ನು ನಮೂದಿಸಿಕೊಳ್ಳಬೇಕು. ಅವಶ್ಯಕ ದಾಖಲಾತಿಗಳಾದ ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಿಕಲಚೇತನರ ಗುರುತಿನ ಚೀಟಿ ಅಥವಾ ಯು.ಡಿ.ಐ.ಡಿ ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು (ಎಂಆರ್ಡಬ್ಲುö್ಯ) ಜಿಲ್ಲೆಯ ವಿಕಲಚೇತನರು ಸಂಪರ್ಕಿಸಿ ತಮ್ಮ ದಾಖಲಾತಿಗಳನ್ನು ನೀಡಿ ಮಾಹಿತಿಯನ್ನು ತಂತ್ರಾAಶದಲ್ಲಿ ದಾಖಲಿಸಿಕೊಳ್ಳುವಂತೆ ತಿಳಿಸಿದ್ದಾರೆ.
ತಂತ್ರಾAಶದಲ್ಲಿ ಅಳವಡಿಸಲು ತಾ. ೨೦ ಕೊನೆಯ ದಿನವನ್ನು ಕೇಂದ್ರ ಕಚೇರಿಯಿಂದ ನಿಗದಿಗೊಳಿಸಿದ್ದು ನಂತರ ದಾಖಲಾತಿಗಳನ್ನು ನೀಡಿದ್ದಲ್ಲಿ ಅಳವಡಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂ.ಸಂ.೦೮೨೭೨-೨೯೫೮೨೯ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಆರ್.ಸಂಪತ್ಕುಮಾರ್ ಅವರು ತಿಳಿಸಿದ್ದಾರೆ.