ಸಿದ್ದಾಪುರ, ಏ. ೯: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ೨೦೨೦-೨೧ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿಯನ್ನು ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಪಿಡಿಓ ಹೆಚ್.ಎಸ್. ಅನಿಲ್ಕುಮಾರ್ ಪಡೆದುಕೊಂಡಿದ್ದಾರೆ.
೨೦೨೦-೨೧ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕಾರಕ್ಕೆ ಪಿಡಿಓ ಅನಿಲ್ಕುಮಾರ್ ಆಯ್ಕೆಗೊಂಡು ಪ್ರಶಸ್ತಿಗೆ ಭಾಜನರಾಗಿದ್ದಾರೆ. ತಾ. ೯ ರಂದು ಹುಬ್ಬಳ್ಳಿಯಲ್ಲಿ ನಡೆದ ರಾಜ್ಯಮಟ್ಟದ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಸಚಿವರುಗಳ ಸಮ್ಮುಖದಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾಬು ವರ್ಗೀಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.