ಗೋಣಿಕೊಪ್ಪಲು, ಏ. ೯: ರಸಗೊಬ್ಬರಗಳ ಬೆಲೆಯನ್ನು ಹೆಚ್ಚಿಸಿರುವ ಕ್ರಮವನ್ನು ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.
ರೈತ ಸಂಘದ ಕೇಂದ್ರ ಕಚೇರಿ ಗೋಣಿಕೊಪ್ಪಲುವಿನಲ್ಲಿ ರೈತ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಬೆಲೆ ಹೆಚ್ಚಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಬೆಲೆ ಹೆಚ್ಚಳದ ಆದೇಶ ಹಿಂಪಡೆಯುವAತೆ ಆಗ್ರಹಿಸಿದರು. ದೇಶ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ, ರೈತರು ಕಷ್ಟ ಪಟ್ಟು ದುಡಿದು ದೇಶವನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ. ಕೃಷಿಯು ರಾಜ್ಯದಲ್ಲಿ ಶೇ. ೬.೪ ರಷ್ಟು ಪ್ರಗತಿ ಕಂಡಿದೆ. ದೇಶದಲ್ಲಿ ಶೇ. ೩.೪ಕ್ಕೂ ಹೆಚ್ಚು ಬೆಳವಣಿಗೆ ಕಂಡಿದೆ. ದೇಶದ ಜಿಡಿಪಿ ಗೆ ಈ ವರ್ಷ ಶೇ. ೨೦ ರಷ್ಟು ಕೊಡುಗೆಯನ್ನು ಕೃಷಿ ಕೊಟ್ಟಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. ೬೦ ರಷ್ಟು ಹೆಚ್ಚಿಸಿರುವುದು ಸರಿಯಲ್ಲ. ಕೂಡಲೇ ಬೆಲೆ ಹೆಚ್ಚಳ ಹಿಂಪಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.
ಸಭೆಯಲ್ಲಿ ರೈತ ಸಂಘದ ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ಖಜಾಂಚಿ ಇಟ್ಟೀರ ಸಬಿತ ಭೀಮಯ್ಯ, ಪೊನ್ನಂಪೇಟೆ ಹೋಬಳಿ ಅಧ್ಯಕ್ಷ ಆಲೆಮಾಡ ಮಂಜುನಾಥ್, ಹುದಿಕೇರಿ ಹೋಬಳಿ ಅಧ್ಯಕ್ಷ ಚಂಗುಲAಡ ಸೂರಜ್, ಅಮ್ಮತ್ತಿ ಹೋಬಳಿ ಅಧ್ಯಕ್ಷ ಮಂಡೇಪAಡ ಪ್ರವೀಣ್, ಪದಾಧಿಕಾರಿಗಳಾದ ತೀತರಮಾಡ ರಾಜ, ಪುಚ್ಚಿಮಾಡ ರಾಯ್ ಮಾದಪ್ಪ ಮುಂತಾದವರು ಉಪಸ್ಥಿತರಿದ್ದರು.