ಕೂಡಿಗೆ, ಏ. ೧೦: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ಕಸ ವಿಂಗಡಣೆಗೆ ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ವತಿಯಿಂದ ಕಸದ ಬಕೆಟ್‌ಗಳನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಸ್. ಮಂಜುನಾಥ ವಿತರಣೆ ಮಾಡಿದರು.

ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮದ ಎಲ್ಲಾ ವಾರ್ಡ್ ನವರು ತಮ್ಮ ಮನೆಯ ಕಸವನ್ನು ವಿಂಗಡಣೆ ಮಾಡಿ ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ಕಸ ತುಂಬುವ ವಾಹನಕ್ಕೆ ಹಾಕಬೇಕೆಂದು ಮನವಿ ಮಾಡಿದರು.

ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಅನೇಕ ಕಾಮಗಾರಿಗಳನ್ನು ಕೈಗೊಳ್ಳುವ ಅವಕಾಶಗಳು ಇದ್ದು ಗ್ರಾಮಸ್ಥರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡು ಕಾಮಗಾರಿಗಳನ್ನು ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್ ಇಂಗು ಗುಂಡಿ ನರೇಗಾ ಸೇರಿದಂತೆ ಸರಕಾರದ ವಿವಿಧ ಯೋಜನೆಯ ಮಾಹಿತಿಯನ್ನು ಗ್ರಾಮಸ್ಥರಿಗೆ ತಿಳಿಸಿದರು. ಈ ಸಂದರ್ಭ ಉಪಾಧ್ಯಕ್ಷೆ ಸೇರಿದಂತೆ ಸದಸ್ಯರು ಹಾಜರಿದ್ದರು.