ಕೂಡಿಗೆ, ಏ. ೧೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದಲ್ಲಿರುವ ಶ್ರೀ ಹರಕೆ ಚೌಡೇಶ್ವರಿ ದೇವಿ ದೇವಸ್ಥಾನ ಸಮಿತಿಯ ವತಿಯಿಂದ ಶ್ರೀ ಹರಕೆ ಚೌಡೇಶ್ವರಿ ದೇವಿಯ ಮತ್ತು ನಾಗದೇವರ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಧಾರ್ಮಿಕ ಕಾರ್ಯದೊಂದಿಗೆ ನಡೆಯಿತು
ಬೆಳಿಗ್ಗೆ ಗಣಪತಿ ಹೋಮ, ದುರ್ಗಾ ಹೋಮ, ಕಲಾವೃದ್ಧಿ ಹೋಮ, ಅಭಿಷೇಕ, ಕಲಶ ಪ್ರತಿಷ್ಟಾಪನೆ ಸೇರಿದಂತೆ ದೇವಿಗೆ ವಿವಿಧ ಅಭಿಷೇಕಗಳು ಸೇರಿದಂತೆ ವಿಶೇಷ ಪೂಜೆಗಳು ನಡೆದವು.
ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನಡೆಯಿತು. ಪೂಜಾ ಕಾರ್ಯಕ್ರಮದಲ್ಲಿ ಕೂಡಿಗೆ, ಕೂಡುಮಂಗಳೂರು, ಮದಲಾಪುರ, ಹೆಗ್ಗಡಹಳ್ಳಿ, ಮಲ್ಲೇನಹಳ್ಳಿ, ಹುದುಗೂರು ಗ್ರಾಮ ವ್ಯಾಪ್ತಿಯ ಭಕ್ತರು ಭಾಗವಹಿಸಿದ್ದರು. ಇದರ ಅಂಗವಾಗಿ ಸಂಜೆ ದೀಪಾಲಂಕಾರ ಮತ್ತು ವಿಶೇಷ ಪೂಜಾ ಕಾರ್ಯಕ್ರಮ ಮತ್ತು ತೀರ್ಥಪ್ರಸಾದ ವಿನಿಯೋಗ ನಡೆದವು. ಈ ಸಂದರ್ಭ ದೇವಸ್ಥಾನ ಸಮಿತಿ ಅಧ್ಯಕ್ಷ ಕೆ.ಸಿ. ರವಿ, ಕಾರ್ಯದರ್ಶಿ ಪ್ರವೀಣ್, ಶಿವಕುಮಾರ್, ರಾಜು, ಪ್ರಸನ್ನ, ಪ್ರದೀಪ್ ಸೇರಿದಂತೆ ಸೇವಾ ಸಮಿತಿಯ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.