ಸುಂಟಿಕೊಪ್ಪ, ಏ. ೧೦: ಅಂದಗೋವೆ ಬಸವೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯದ ನಿಮಿತ್ತ ಪೊನ್ನಂಪೇಟೆ ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿಗಳಾದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಅವಿನಾಶ್ ಆರಾಧ್ಯ ಅವರು ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಬಸವೇಶ್ವರ ದೇವಾಲಯವನ್ನು ಜೀಣೋದ್ಧಾರಗೊಳಿಸಲು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ದೇವರಿಗೆ ಇಂದು ಬೆಳಿಗ್ಗೆಯಿಂದ ವಿಶೇಷ ಪೂಜೆ, ರುದ್ರಾಭಿಷೇಕ, ಬಿಲ್ವಪತ್ರೆ ಅರ್ಚನೆ, ಪುಷ್ಪಾರ್ಚನೆ, ಕುಂಕುಮಾರ್ಚನೆ,ತುAಬೆ ಪುಷ್ಪದಲ್ಲಿ ಅಷ್ಟೋತ್ತರ, ಹೂವಿನ ಅಲಂಕಾರವನ್ನು ಮಾಡಲಾಯಿತು.

ನಂತರ ದೇವಾಲಯದ ಪದಾಧಿಕಾರಿಗಳು, ಗ್ರಾಮಸ್ಥರ ಸಮ್ಮುಖದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆದು ಅನ್ನಸಂತರ್ಪಣೆ ನಡೆಯಿತು.