ಮಡಿಕೇ, ಏ. ೧೦: ನಗರದ ಶ್ರೀ ಮುತ್ತಪ್ಪ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಶಾಸ್ತಪ್ಪ ದೇವರ ವೆಳ್ಳಾಟಂ ವಿವಿಧ ಧಾರ್ಮಿಕ ಪೂಜಾ ಕಾರ್ಯಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಶ್ರೀ ಮುತ್ತಪ್ಪ ದೇವರ ಕಲಶ ಪ್ರತಿಷ್ಠೆ, ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವುದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯ ನಡೆಯಿತು.

ಸಂಜೆ ಶ್ರೀ ಶಾಸ್ತಪ್ಪ ದೇವರ ವೆಳ್ಳಾಟಂ, ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ ನಡೆಯಿತು.

ರಾತ್ರಿ ಶ್ರೀ ವಿಷ್ಣುಮೂರ್ತಿ ಮೇಲೇರಿಗೆ ಅಗ್ನಿಸ್ಪರ್ಶ, ಶ್ರೀ ಪೊವದಿ ವೆಳ್ಳಾಟಂ, ಶ್ರೀ ವಿಷ್ಣುಮೂರ್ತಿ ವೆಳ್ಳಾಟಂ, ಶ್ರೀ ಶಿವಭೂತ ತೆರೆ, ಶ್ರೀ ಗುಳಿಗ ದೇವರ ತೆರೆ, ಶ್ರೀ ಕುಟ್ಟಿಚಾತನ್ ದೇವರ ತೆರೆ, ಕಳಗ ಪಾಟ್, ಸಂದ್ಯಾವೇಲೆ ನಡೆಯಿತು.

ತಾ. ೧೦ರ ಬೆಳಿಗ್ಗೆ ೪ ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ತೆರೆ, ಬೆಳಿಗ್ಗೆ ೫ ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವರ ಮೇಲೇರಿ, ೮ ಗಂಟೆಗೆ ಶ್ರೀ ಪೊವ್ವದಿ ತೆರೆ, ೯.೩೦ ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವರ ಬಾರಣೆ, ಮಧ್ಯಾಹ್ನ ೧೧.೩೦ಕ್ಕೆ ಧ್ವಜ ಅವರೋಹಣ ನಡೆಯಿತು.