ಕುಶಾಲನಗರ, ಏ. ೧೧: ಕುಶಾಲನಗರ ಕೊಡವ ಸಮಾಜದ ವತಿಯಿಂದ ಉಚಿತ ಬಾಳೋಪಾಟ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಮಾಜದ ಅಧ್ಯಕ್ಷ ಮಂಡೇಪAಡ ಬೋಸ್ ಮೊಣ್ಣಪ್ಪ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಂಬುಕುತ್ತೀರ ಸುಬ್ಬಯ್ಯ, ಚಂಗಪ್ಪ, ಸಿದ್ದಂಡ ಮಹೇಶ್ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದರು. ಕೊಡವ ಸಮಾಜದ ಆಡಳಿತ ಮಂಡಳಿಯ ನಿರ್ಧಾರದಂತೆ ಪ್ರತಿ ಶನಿವಾರದಂದು ಸಂಜೆ ವೇಳೆಗೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿರುವ ಸಮಾಜದ ಅಧ್ಯಕ್ಷ ಮೊಣ್ಣಪ್ಪ, ಸುಮಾರು ೨೫ಕ್ಕೂ ಅಧಿಕ ಆಸಕ್ತರು ಈ ತರಬೇತಿಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಕುಶಾಲನಗರ ಕೊಡವ ಸಮಾಜದ ಪದಾಧಿಕಾರಿಗಳು ಇದ್ದರು.