ಮಡಿಕೇರಿ, ಏ. ೧೧: ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ಹಕ್ಕುಗಳ ರಕ್ಷಣಾ ಇಲಾಖೆ, ಪೊಲೀಸ್, ಕಂದಾಯ, ಸಾರ್ವಜನಿಕ ಶಿಕ್ಷಣ, ಸಮಾಜ ಕಲ್ಯಾಣ ಹೀಗೆ ಹಲವು ಇಲಾಖೆಗಳ ಅಧಿಕಾರಿಗಳು ಪರಿಣಾಮ ಕಾರಿಯಾಗಿ ಕಾರ್ಯನಿರ್ವಹಿಸುವಂತೆ ರಾಷ್ಟಿçÃಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಾ. ಆರ್.ಜಿ. ಆನಂದ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ, ಪೋಕ್ಸೋ ಕಾಯ್ದೆ, ಬಾಲನ್ಯಾಯ, ಕಾಯ್ದೆ ಮತ್ತಿತರ ವಿಚಾರಗಳ ಕುರಿತು ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತ ನಾಡಿದರು.

ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವಲ್ಲಿ ಬೀದಿ ನಾಟಕ ಏರ್ಪಡಿಸುವುದು, ಕರಪತ್ರ ಹಂಚು ವುದು, ಹೀಗೆ ಹಲವು ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಬೇಕು. ಹಾಡಿಗಳು ಸೇರಿದಂತೆ ವಿವಿಧ ಗ್ರಾಮೀಣ ಪ್ರದೇಶ ಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.

೧೮ ವರ್ಷದೊಳಗಿನ ಮಕ್ಕಳು ದುಡಿಯುತ್ತಿರುವುದು ಕಂಡುಬAದಲ್ಲಿ ಬಾಲಮಂದಿರಕ್ಕೆ ಸೇರ್ಪಡೆ ಮಾಡಿ ಶಿಕ್ಷಣಕ್ಕೆ ಒತ್ತು ನೀಡುವುದು. ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯು ವುದು, ನಿರ್ಗ ತಿಕ ಮಕ್ಕಳು ಕಂಡು ಬಂದಲ್ಲಿ ತಕ್ಷಣ ವೇ ಸ್ಪಂದಿಸ ಬೇಕು. ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು. ಮಕ್ಕಳ ರಕ್ಷಣೆ ಸಂಬAಧಿಸಿದAತೆ ತುರ್ತು ಕರೆಗಳಿಗೆ ಸ್ಪಂದಿಸಬೇಕು. ಕಳೆದ ಒಂದು ವರ್ಷದಿಂದ ಕೋವಿಡ್‌ನಿಂದಾಗಿ ಒಂದಲ್ಲ ಒಂದು ರೀತಿಯಲ್ಲಿ ಸಂಕಷ್ಟ ಎದುರಿಸುತ್ತಿದ್ದು, ಆ ನಿಟ್ಟಿನಲ್ಲಿ ಮಕ್ಕಳ ರಕ್ಷಣೆಗೆ ವಿಶೇಷ ಆದ್ಯತೆ ನೀಡಬೇಕಿದೆ. ಮಕ್ಕಳ ಕಲ್ಯಾಣ ಆಯೋಗದವರು ೦೬ ಸದಸ್ಯರನ್ನು ಒಳಗೊಂಡAತೆ ಪೊಲೀಸ್ ಉಪ ಆಯುಕ್ತರು, ಮಕ್ಕಳ ಸಹಾಯವಾಣಿ ಇಲಾಖೆಯ ಸಿಬ್ಬಂದಿಗಳ ಸಹಕಾರದಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ಮಾರ್ಗದರ್ಶನ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಐ.ಟಿ.ಡಿ.ಪಿ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಬಿ.ಸಿ.ಎಂ ಅಧಿಕಾರಿ ಲಿಂಗರಾಜು, ತಹಶೀಲ್ದಾರ್ ಮಹೇಶ್, ಸಿ.ಡಬ್ಲುö್ಯಸಿ ಸದಸ್ಯರು, ಪೊಲೀಸ್ ಸಿಬ್ಬಂದಿಗಳು ಇತರರು ಇದ್ದರು.