ಶನಿವಾರಸಂತೆ, ಏ. ೧೧: ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಗ್ರಾಮದ ಕೆರೆಗೆ ಜಲಶಕ್ತಿ ಅಭಿಯಾನದ ಅಂಗವಾಗಿ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕೆರೆಯ ಹೂಳನ್ನು ತೆಗೆಯುವ ಕಾಮಗಾರಿಗೆ ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮ ಕಿರಣ್ ಚಾಲನೆ ನೀಡಿದರು.

ಗ್ರಾಮೀಣ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಹೆಚ್.ಎ. ರವೀಶ್ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಅಂರ್ತಜಲ ಅಭಿವೃದ್ಧಿ ಪಡಿಸಿ ಬೇಸಿಗೆಯಲ್ಲಿ ಕೆರೆಯ ಹೂಳು ತೆಗೆದು ಮಳೆ ನೀರನ್ನು ಹಿಡಿದಿಡುವುದರಿಂದ ಮುಂದಿನ ಬೇಸಿಗೆಯಲ್ಲಿ ನೀರಿನ ಅಭಾವವನ್ನು ಕಡಿಮೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.

ತಾAತ್ರಿಕ ಸಂಯೋಜಕ ರಂಜಿತ್, ಗ್ರಾ.ಪಂ. ಉಪಾಧ್ಯಕ್ಷ ನಿತಿನ್, ಸದಸ್ಯರುಗಳಾದ ಡಿ.ಪಿ. ಬೋಜಪ್ಪ, ಸಿ.ಜೆ. ಗಿರೀಶ್, ಎಸ್.ಪಿ. ಭಾಗ್ಯ, ಹೆಚ್.ಆರ್. ಭವಾನಿ, ಎಸ್.ಸಿ. ಕಾಂತರಾಜು, ಎಂ.ಡಿ. ದೇವರಾಜು, ಪಂಚಾಯಿತಿ ನೌಕರರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.