ಮಡಿಕೇರಿ, ಏ. ೧೧: ತಾಳತ್ತಮನೆ ನೇತಾಜಿ ಯುವಕ ಸಂಘದ ೨೯ನೇ ವರ್ಷದ ವಾರ್ಷಿಕ ಮಹಾಸಭೆಯು ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬಿ.ಬಿ. ಸುದೀಪ್ ರೈ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಬಿ.ಆರ್. ಯತೀಶ್ ರೈ ವಾರ್ಷಿಕ ವರದಿ ವಾಚಿಸಿದರು. ಖಜಾಂಚಿ ಕೆ.ಪಿ. ಕಾರ್ಯಪ್ಪ ೨೦೨೦-೨೧ನೇ ಸಾಲಿನ ಖರ್ಚು ವೆಚ್ಚಗಳ ವರದಿಯನ್ನು ಮಂಡಿಸಿದರು. ನಂತರ ಸಂಘದ ಹಿರಿಯ ಕಾರ್ಯಕಾರಿ ಸಮಿತಿ ಸದಸ್ಯ ಗಿರೀಶ್ ತಾಳತ್ತಮನೆ ಮಾತನಾಡಿ, ಮುಂದಿನ ದಿನಗಳಲ್ಲಿ ಹೆಚ್ಚು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂಘದ ಪ್ರಗತಿಗೆ ಸಹಕರಿಸುವಂತೆ ಕೋರಿದರು. ಇದೇ ಸಂದರ್ಭದಲ್ಲಿ ೨೦೨೧-೨೨ನೇ ಸಾಲಿಗೆ ಕಾರ್ಯಕಾರಿ ಸಮಿತಿಯ ಆಯ್ಕೆ ನಡೆಯಿತು. ಅಧ್ಯಕ್ಷ ಬಿ.ಬಿ. ಸುದೀಪ್ ರೈ, ಉಪಾಧ್ಯಕ್ಷರಾಗಿ ಬಿ.ಬಿ. ಹರೀಶ್ ರೈ, ಕಾರ್ಯದರ್ಶಿಯಾಗಿ ಬಿ.ಆರ್. ಯತೀಶ್ ರೈ, ಸಹ ಕಾರ್ಯದರ್ಶಿಯಾಗಿ ಡಿ.ಪಿ. ಮಿಲನ್, ಖಜಾಂಚಿಯಾಗಿ ಕೆ.ಪಿ. ಕಾರ್ಯಪ್ಪ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಎ. ಕಿರಣ್ ಮತ್ತು ಕ್ರೀಡಾ ಕಾರ್ಯದರ್ಶಿಯಾಗಿ ಪಿ.ಪಿ. ವಿಘ್ನೇಶ್ವರ ಅವರನ್ನು ಆಯ್ಕೆ ಮಾಡಲಾಯಿತು.